ಹಾವೇರಿ: ಪಟಾಕಿ ಗೋದಾಮಿನಲ್ಲಿ ಬೆಂಕಿ ಅನಾಹುತ ; ಮೂವರ ಸಜೀವ ದಹನ

ಹಾವೇರಿ: ಹಾವೇರಿ ಹೊರವಲಯದ ಸಾತೇನಹಳ್ಳಿ ಸಮೀಪದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಜೀವವಾಗಿ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಭಾರಿ ಪ್ರಮಾಣದ ಸ್ಪೋಟ ಹಾಗೂ ಬೆಂಕಿ ಜ್ವಾಲೆಯಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ.
ಮೃತರನ್ನು ದ್ಯಾಮಪ್ಪ ಓಲೇಕಾರ, ರಮೇಶ ಬಾರ್ಕಿ, ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ. ಇನ್ನೂ ಹಲವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಮೃತರು ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಪಟಾಕಿ ಅಂಗಡಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬರ ಶವ ಇರುವ ಶಂಕೆ ಹಿನ್ನಲೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಗಣೇಶ ಹಬ್ಬ ಹಿನ್ನೆಲೆಯಲ್ಲಿ ಗೋದಾಮಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಟಾಕಿ ಸಂಗ್ರಹಿಸಲಾಗಿತ್ತು. ಪಟಾಕಿ ಸಂಗ್ರಹಿಸಿಡಲಾಗಿದ್ದ ಗೋದಾಮಿನ ಬಳಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದು, ಅದರ ಕಿಡಿ ಸಿಡಿದು ಪಟಾಕಿಗೆ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ. 5 ಗಂಟೆಗಳ ಕಾಲ 8 ಕ್ಕೂ ಅಧಿಕ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement