ಕರ್ನಾಟಕದ 14 ಜಿಲ್ಲೆಗಳಲ್ಲಿ ಮೂರು ದಿನ ಜೋರಾಗಿ ಮಳೆ ಬೀಳುವ ಸಾಧ್ಯತೆ :ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಒಳನಾಡಿನ 14 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್‌ 30 ರಂದು ಚಿಕ್ಕಮಗಳೂರು, ಚಾಮರಾಜನಗರ, 31 ರಂದು ಬಳ್ಳಾರಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಸೆಪ್ಟಂಬರ್‌ 1 ರಂದು ರಾಯಚೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಬೆಂಗಳೂರು ನಗರದಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement