ಕಾಡಾನೆ ದಾಳಿ : ವನ್ಯಜೀವಿ ಶಾರ್ಪ್‌ ಶೂಟರ್‌ ವೆಂಕಟೇಶ ಸಾವು

ಹಾಸನ: ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟ ಘಟನೆ ನಡೆದಿದೆ.
ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ವೈದ್ಯನ ಜೊತೆ ಹೋದ ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ಭೀಮ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿ ವೆಂಕಟೇಶ, ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಆನೆಗೆ ಚಿಕಿತ್ಸೆ ನೀಡುವ ಮುನ್ನ ಅರವಳಿಕೆ ಚುಚ್ಚುಮದ್ದು ನೀಡುವಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡ ಭೀಮನನ್ನು ಸೆರೆ ಹಿಡಿದು ಚಿಕಿತ್ಸೆ ನೀಡಲು ಹಳ್ಳಿಯೂರು ಬಳಿ ವೆಂಕಟೇಶ ಅವರು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ಈ ವೇಳೆ ಏಕಾಏಕಿಯಾಗಿ ಆನೆ ವೆಂಕಟೇಶ ಅವರ ಮೇಲೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement