ಕುಮಾರಸ್ವಾಮಿ ಆರೋಗ್ಯದಲ್ಲಿ ಸುಧಾರಣೆ : ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

ಬೆಂಗಳೂರು : ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.
ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ನಂತರ ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿದ್ದಾರೆ.
ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಕುಮಾರಸ್ವಾಮಿ ಅವರ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದ ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ನಿರ್ಮಲಾನಂದ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement