ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡದ ಘಟನೆ: ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.
ಬಿಬಿಎಂಪಿಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 45 ವರ್ಷದ ಶಿವಕುಮಾರ ಅವರು ಸೇರಿದಂತೆ 9 ನೌಕರರು ಗಾಯಗೊಂಡಿದ್ದರು. ಸುಟ್ಟ ಗಾಯಗಳಿಂದ ಗಂಭೀರ ಪರಿಸ್ಥಿಯಲ್ಲಿದ್ದ ಶಿವಕುಮಾರ ಅವರನ್ನು ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬುಧವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಪೊಲೋ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಬಿಎಂಪಿ ಮುಖ್ಯ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ ಮೈಸೂರು ಜಿಲ್ಲೆಯ ನಂಜನಗೂಡು ಮೂಲದವರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಬಿಬಿಎಂಪಿಯ ಕ್ವಾಲಿಟಿ ಕಂಟ್ರೋಲ್ ರೂಂನಲ್ಲಿ ಆಗಸ್ಟ್‌ 11ರಂದು ಅಗ್ನಿ ಅನಾಹುತ ಸಂಭವಿಸಿತ್ತು. ಬಿಬಿಎಂಪಿ ಲ್ಯಾಬ್‌ನಲ್ಲಿ ಡಾಂಬರ್ ಮತ್ತು ಸಿಮೆಂಟ್ ಸೇರಿದಂತೆ ಇತರೆ ಕೆಮಿಕಲ್‌ಗಳನ್ನ ಲ್ಯಾಬ್‌ನಲ್ಲಿ ಪರಿಶೀಲನೆ ನಡೆಸಲಾಗುತ್ತಿತ್ತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement