ಸೆಪ್ಟೆಂಬರ್ 18 ರಿಂದ 22ರ ವರೆಗೆ ವಿಶೇಷ ಸಂಸತ್ ಅಧಿವೇಶನ

ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರ ವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಗುರುವಾರ ತಿಳಿಸಿದ್ದಾರೆ.
“ಅಮೃತ್ ಕಾಲ ಸಂಸತ್ತಿನಲ್ಲಿ ಫಲಪ್ರದ ಚರ್ಚೆಗಳನ್ನು ನಡೆಸಲು ಎದುರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ. ಆದರೆ, ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಸರ್ಕಾರ ಇನ್ನೂ ಬಹಿರಂಗಪಡಿಸಿಲ್ಲ.
ರಾಜ್ಯಸಭಾ ಸಂಸದೆ ಮತ್ತು ಶಿವಸೇನೆ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ವಿಶೇಷ ಸಂಸತ್ತಿನ ಅಧಿವೇಶನಕ್ಕೆ ಘೋಷಣೆಗೆ ಪ್ರತಿಕ್ರಿಯಿಸಿ, “ಭಾರತದ ಪ್ರಮುಖ ಹಬ್ಬವಾದ ಗಣೇಶ ಚತುರ್ಥಿಯ ಸಮಯದಲ್ಲಿ ಅಧಿವೇಶನವನ್ನು ಕರೆಯುತ್ತಿರುವುದು ದುರದೃಷ್ಟಕರ” ಎಂದು ಹೇಳಿದರು. ವಿಶೇಷ ಸಂಸತ್ತನ್ನು ಕರೆದಿರುವುದು “ಹಿಂದೂ ಭಾವನೆಗಳಿಗೆ ವಿರುದ್ಧವಾಗಿದೆ” ಎಂದು ಅವರು ಹೇಳಿದರು.
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರ ವರೆಗೆ 23 ದಿನಗಳ ಅವಧಿಯಲ್ಲಿ ಒಟ್ಟು 17 ಅಧಿವೇಶನಗಳನ್ನು ನಡೆಸಿತು. ಮಣಿಪುರದ ಹಿಂಸಾಚಾರದ ಬಗ್ಗೆ ಪ್ರತಿ ದಿನವೂ ಅಧಿವೇಶನಗಳು ಅಡ್ಡಿಪಡಿಸಿದವು ಮತ್ತು ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ಅವಿಶ್ವಾಸ ನಿರ್ಣಯ ಸಹ ಮಂಡಿಸಿದ್ದರು.

ಪ್ರಮುಖ ಸುದ್ದಿ :-   ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ; ಪತ್ನಿಗೆ ಥಳಿಸಿ ಪರಾರಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement