‘ಡಬಲ್ ಐಸ್ಮಾರ್ಟ್’ ಸಿನೆಮಾದ ಕತ್ತಿವರಸೆಯ ದೃಶ್ಯದ ಚಿತ್ರೀಕರಣದ ವೇಳೆ ನಟ ಸಂಜತ ದತ್ತಗೆ ಗಾಯ ; ವರದಿ

ಪೂರಿ ಜಗನ್ನಾಥ ಅವರ ಮುಂದಿನ ಸಿನೆಮಾ ‘ಡಬಲ್ ಐಸ್ಮಾರ್ಟ್’ ಚಿತ್ರೀಕರಣದಲ್ಲಿ ನಟ ಸಂಜಯ ದತ್ ಅವರು ಸೆಟ್‌ನಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಿಂಕ್ವಿಲ್ಲಾದಲ್ಲಿನ ವರದಿಯ ಪ್ರಕಾರ, ಅವರು ಹೊಡೆದಾಟದ ದೃಶ್ಯವನ್ನು ಚಿತ್ರೀಕರಿಸುತ್ತಿದ್ದರು. ‘ಅವರು ಖಡ್ಗ ಹಿಡಿದ ಫೈಟಿಂಗ್ ಅನ್ನು ಒಳಗೊಂಡಿರುವ ದೊಡ್ಡ ಆಕ್ಷನ್ ದೃಶ್ಯಕ್ಕಾಗಿ ಚಿತ್ರೀಕರಣ ನಡೆಸುತ್ತಿದ್ದರು ಮತ್ತು ಆ ಸಂದರ್ಭದಲ್ಲಿ ಗಾಯಗೊಂಡರು. ಅವರ ತಲೆಗೆ … Continued

ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ ಮಾತನಾಡುವಾಗ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಉಪೇಂದ್ರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ’ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶಕುಮಾರ ಉಪೇಂದ್ರ ವಿರುದ್ಧ … Continued

ಹಳಬರು ಎರಡೂವರೆ ವರ್ಷದ ನಂತರ ಸಚಿವ ಸ್ಥಾನದಿಂದ ಕೆಳಗಿಳಿದು ಬೇರೆಯವರಿಗೆ ಅವಕಾಶ ಮಾಡಿಕೊಬೇಕು : ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿದು ಹೊಸಬರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಬೆಂಗಲೂರಿನಲ್ಲಿ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಯ್ಕೆ ಮಾಡುವುದು ಹೈಕಮಾಂಡ್ ನಿರ್ಧಾರ. ಆದರೆ ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು … Continued

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಪಡಿಸಲಾಗುವುದು. ಎನ್‌ಇಪಿ(NEP)ಯನ್ನು ರದ್ದು ಮಾಡುವ ಮಾಡುವ … Continued

ಹಿಮಾಚಲದಲ್ಲಿ ಮೇಘಸ್ಫೋಟ, ಭೂಕುಸಿತದಲ್ಲಿ 48 ಸಾವು ; ಹಠಾತ್‌ ಪ್ರವಾಹದಿಂದ ಕೊಚ್ಚಿಹೋದ 7 ಮಂದಿ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಸಂಭವಿಸಿದ ಭಾರೀ ಮಳೆಯಿಂದ ಉಂಟಾದ ದುರಂತದಲ್ಲಿ, ಗುಡ್ಡಗಾಡು ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ ಕಳೆದ ಎರಡು ದಿನಗಳಲ್ಲಿ 48 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮಳೆಯಿಂದ ಹಠಾತ್ ಪ್ರವಾಹಕ್ಕೆ ಏಳು ಜನರು ಕೊಚ್ಚಿ ಹೋಗಿ ಸಾವಿಗೀಡಾಗಿದ್ದಾರೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು … Continued

ವೀಡಿಯೊ..| ಬಿಜೆಪಿ, ಅದರ ಬೆಂಬಲಿಗರನ್ನು ‘ರಾಕ್ಷಸರು’ ಎಂದು ಕರೆದ ಕಾಂಗ್ರೆಸ್ ನಾಯಕ ರಣದೀಪ ಸುರ್ಜೇವಾಲಾ : ಭುಗಿಲೆದ್ದ ವಿವಾದ

ನವದೆಹಲಿ: ಕಾಂಗ್ರೆಸ್ ನಾಯಕ ರಣದೀಪ ಸುರ್ಜೇವಾಲಾ ಅವರು ಬಿಜೆಪಿ ಮತ್ತು ಅದರ ಬೆಂಬಲಿಗರ ಬಗ್ಗೆ ಹೇಳಿಕೆ ನೀಡಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ. ಆಡಳಿತ ಪಕ್ಷ ಮತ್ತು ಅದಕ್ಕೆ ಮತ ಹಾಕುವವರು “ರಾಕ್ಷಸರು (demons)” ಎಂದು ಹರ್ಯಾಣದಲ್ಲಿ ಸಭೆಯೊಂದರಲ್ಲಿ ಮಾತನಾಡಿದ ಅವರ ಹೇಳಿಕೆ ಬಿಜೆಪಿಯಿಂದ ತೀವ್ರ ಖಂಡನೆಗೆ ಒಳಗಾಗಿದ್ದಾರೆ. “ಬಿಜೆಪಿ ಮತ್ತು ಜನನಾಯಕ ಜನತಾ ಪಾರ್ಟಿ (ಜೆಜೆಪಿ)ಯ … Continued

ಕರ್ನಾಟಕದ ಇಬ್ಬರು ಐಪಿಎಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ; 18 ಮಂದಿಗೆ ವಿಶಿಷ್ಟ ಸೇವಾ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ  ರಾಷ್ಟ್ರಪತಿ ಪದಕ ಹಾಗೂ ವಿಶಿಷ್ಟ ಪದಕ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗಿದೆ. ರಾಜ್ಯದ ಇಬ್ಬರು ಐಪಿಎಸ್‌ ಅಧಿಕಾರಿಗಳಾದ ಸೀಮಂತಕುಮಾರ ಸಿಂಗ್, ಎಸ್. ಮುರುಗನ್ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ರಾಷ್ಟ್ರಪತಿ ಪದಕ ಪುರಸ್ಕೃತರು: ಸೀಮಂತಕುಮಾರ್ ಸಿಂಗ್, ಎಡಿಜಿಪಿ ಎಸ್. ಮುರುಗನ್, ಎಡಿಜಿಪಿ ವಿಶಿಷ್ಟ ಸೇವಾ ಪದಕ: … Continued

ಚಂದ್ರನ ಮೇಲ್ಮೈಯಿಂದ ಕೇವಲ 177 ಕಿಮೀ ದೂರದಲ್ಲಿದೆ ಚಂದ್ರಯಾನ-3 ಬಾಹ್ಯಾಕಾಶ ನೌಕೆ : ವಿಕ್ರಂ ಲ್ಯಾಂಡರ್ ಇದರಿಂದ ಬೇರ್ಪಡಲು ಒಂದು ಮಾತ್ರ ಹಂತ ಬಾಕಿ

ಬೆಂಗಳೂರು: ಚಂದ್ರಯಾನ – 3 ಬಾಹ್ಯಾಕಾಶ ನೌಕೆ ಚಂದ್ರನಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಇಸ್ರೋ ನಿಯಂತ್ರಣ ಕೇಂದ್ರದ ತಜ್ಞರು ಬಾಹ್ಯಾಕಾಶ ನೌಕೆಯನ್ನು ಚಂದ್ರನ ಬಳಿಗೆ ಮತ್ತಷ್ಟು ಸಮೀಪ ಹೋಗುವಂತೆ ನೋಡಿಕೊಂಡಿದ್ದಾರೆ. ನೌಕೆಯನ್ನು ಕ್ರಮೇಣವಾಗಿ ಹೆಚ್ಚು-ಅಂಡಾಕಾರದ ಕಕ್ಷೆಯಿಂದ (174 km x 1437 km) ಚಂದ್ರನ ಸುತ್ತ ವೃತ್ತಾಕಾರದ ಕಕ್ಷೆಗೆ (150km x 177km) ಸ್ಥಳಾಂತರಿಸಲಾಗಿದೆ. ಈಗ ನೌಕೆಯು … Continued

ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ ಎಫ್‌ ಐ ಆರ್‌ ಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ನಟ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ದಕ್ಷಿಣ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ನೀಡಿರುವ ದೂರು ಆಧರಿಸಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಎಸ್‌ಸಿ ಮತ್ತು … Continued

ಧಾರವಾಡ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸಾವು

ಧಾರವಾಡ: ಕಾರು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿನಯ ಹಿರೇಮಠ (24) ಹಾಗೂ ಸಂದೀಪ (29) ಎಂದು ಗುರುತಿಸಲಾಗಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ಇವರು ಊಟ ಮಾಡಿಕೊಂಡು ವಾಪಸ್‌ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಓರ್ವ ಸ್ಥಳದಲ್ಲೇ … Continued