ಸ್ಥಳೀಯ ಉತ್ಪಾದನೆ ಹೆಚ್ಚಿಸಲು ಲ್ಯಾಪ್‌ಟಾಪ್‌ಗಳು, ಕಂಪ್ಯೂಟರ್‌ಗಳ ಆಮದು ಮೇಲೆ ಸರ್ಕಾರದ ನಿಷೇಧ : ಗ್ರಾಹಕರ ಮೇಲೆ ಪರಿಣಾಮ ಏನು..?

ನವದೆಹಲಿ: ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್‌ಗಳು ಮತ್ತು ಅಲ್ಟ್ರಾ-ಸ್ಮಾಲ್ ಕಂಪ್ಯೂಟರ್‌ಗಳು ಮತ್ತು ಸರ್ವರ್‌ಗಳ ಆಮದು ಮೇಲೆ ಕೇಂದ್ರ ಸರ್ಕಾರ ಗುರುವಾರ ನಿರ್ಬಂಧಗಳನ್ನು ಹೇರಿದೆ. ಭಾರತದಲ್ಲಿ ಲ್ಯಾಪ್‌ಟಾಪ್‌ಗಳು ಮತ್ತು ಕಂಪ್ಯೂಟರ್‌ಗಳನ್ನು ಮಾರಾಟ ಮಾಡಲು ಯೋಜಿಸುವ ಯಾವುದೇ ಘಟಕ ಅಥವಾ ಕಂಪನಿಯು ಈಗ ತಮ್ಮ ಒಳಬರುವ ಸಾಗಣೆಗೆ ಸರ್ಕಾರದಿಂದ ಅನುಮತಿ ಅಥವಾ ಪರವಾನಗಿಯನ್ನು ಪಡೆಯಬೇಕಾಗುತ್ತದೆ. ಈ ಸಂಬಂಧ … Continued

ಬಿಗಿ ಭದ್ರತೆಯ ನಡುವೆ ಜ್ಞಾನವಾಪಿ ಮಸೀದಿ ಸಂಕೀರ್ಣದ ಸರ್ವೆ ಆರಂಭಿಸಿದ ಎಎಸ್‌ಐ

ವಾರಾಣಸಿ: ಶುಕ್ರವಾರ ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡವು ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿದ್ದು, ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ ಸುಮಾರು 7 ಗಂಟೆಗೆ ಸಂಕೀರ್ಣದ ವೈಜ್ಞಾನಿಕ ಸರ್ವೆ ಪ್ರಾರಂಭವಾಯಿತು. ಮಧ್ಯಾಹ್ನ 12 ಗಂಟೆಯವರೆಗೆ ಸಮೀಕ್ಷೆ ನಡೆಯಲಿದ್ದು, ಇಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಮತ್ತೆ ಸರ್ವೆ … Continued

ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ : ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್‌ಐಆರ್‌

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ನಗರದ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕಸ್ತೂರಿ ರಂಗನ್‌ ವರದಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಖರ್ಗೆ ಅವರ ಮೈಬಣ್ಣದ … Continued

ಬೆಂಗಳೂರಿನಲ್ಲಿ 45 ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ನೇತೃತ್ವದಲ್ಲಿ ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆಯಾದ ಬಿಬಿಎಂಪಿಯ 29 ವಿಧಾನಸಭಾ ಕ್ಷೇತ್ರದ 45 ಕಂದಾಯ ಅಧಿಕಾರಿ (ಆರ್‌ಒ) ಮತ್ತು ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಬಿಬಿಎಂಪಿ ಕಚೇರಿಗಳಲ್ಲಿ ಸಾರ್ವಜನಿಕರಿಂದ ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ … Continued

ಭಾರತೀಯ ಅಂಚೆ ಇಲಾಖೆಯಿಂದ 30,041 ಹುದ್ದೆಗೆ ಅರ್ಜಿ ಆಹ್ವಾನ : 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ಅಂಚೆ ಇಲಾಖೆಯು 30,041 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್‌ ಸೇವಕ, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಅಪ್ಲಿಕೇಶನ್‌ ಸಲ್ಲಿಸಿದವರನ್ನು ಅವರ ವಿದ್ಯಾರ್ಹತೆ ಅಂಕಗಳ … Continued

ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ

ನವದೆಹಲಿ: ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಗುರುವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ದೆಹಲಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣ ಹೊಂದುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು … Continued

ಇದೆಂಥ ತರಬೇತಿ..? ತರಬೇತಿ ಹೆಸರಲ್ಲಿ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ ಸೀನಿಯರ್‌ ಎನ್‌ಸಿಸಿ ಕೆಡೆಟ್ : ವೀಡಿಯೊ ವೈರಲ್‌

ಮುಂಬೈ: ಶಾಲಾ-ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಯ ಭಾಗವಾಗಿರುವ ನ್ಯಾಷನಲ್ ಕೆಡೆಟ್ ಕಾರ್ಪ್ಸ್‌(ಎನ್‌ಸಿಸಿ)ನ ಸೀನಿಯರ್ ವಿದ್ಯಾರ್ಥಿಯೊಬ್ಬ ಜೂನಿಯರ್‌ಗಳಿಗೆ ಮನಬಂದಂತೆ ಬಡಿಗೆಯಿಂದ ಥಳಿಸಿದ ಘಟನೆಯ ವೀಡಿಯೊ ವೈರಲ್ ಆಗಿದೆ. ಮುಂಬೈ ಸಮೀಪದ ಥಾಣೆಯ ಬಂದೋಡ್ಕರ ಕಾಲೇಜಿನಲ್ಲಿನ ಎನ್‌ಸಿಸಿ ತರಬೇತಿಯ ವೇಳೆ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯನ್ನು ದೂರದಿಂದ ನೋಡುತ್ತಿದ್ದ ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ವೈರಲ್​ ಆಗಿರುವ … Continued

ಭಾರೀ ಮಳೆ: ರಸ್ತೆಯಲ್ಲಿ ಮೀನು ಹಿಡಿಯುತ್ತಿರುವ ಜನರು | ವೀಕ್ಷಿಸಿ

ಬೌಧ್: ಎಡೆಬಿಡದೆ ಸುರಿಯುತ್ತಿರುವ ಮಳೆಯು ಒಡಿಶಾದ ವಿವಿಧ ಸ್ಥಳಗಳಲ್ಲಿ ಹಾನಿಯನ್ನುಂಟುಮಾಡಿದ್ದರೆ, ಜಿಲ್ಲಾ ಕೇಂದ್ರವಾದ ಬೌಧ್ ಪಟ್ಟಣದಲ್ಲಿ ಜಲಾವೃತಗೊಂಡ ರಸ್ತೆಯಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೋಜಿನ ದೃಶ್ಯ ಕಂಡುಬಂದಿದೆ. ಈ ಪ್ರದೇಶದಲ್ಲಿ ಭಾರೀ ಮತ್ತು ನಿರಂತರ ಮಳೆಯ ನಂತರ ಒಡಿಶಾ ಸರ್ಕಾರದ ಫಾರ್ಮ್ ಜಲಾವೃತಗೊಂಡ ನಂತರ ಸುಮಾರು ಎರಡು ಟನ್ ಮೀನುಗಳು ಕೊಚ್ಚಿಹೋಗಿವೆ ಎಂದು ವರದಿಯಾಗಿದೆ. ಸ್ಥಳೀಯ ನಿವಾಸಿಗಳು … Continued

ಬೆಂಗಳೂರು : ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಸಮೀಪ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಾರ್ಟ್ ಮೆಂಟ್ ಒಂದರಲ್ಲಿ ಘಟನೆ ನಡೆದಿದ್ದು, ಮೃತರನ್ನು ಪತಿ ವೀರಾರ್ಜುನ ವಿಜಯ (31) ಪತ್ನಿ ಹೇಮಾವತಿ (29) ಹಾಗೂ ಅವರ ಇಬ್ಬರು ಮಕ್ಕಳು ಎಂದು … Continued

ಟೆಕ್ ಸ್ಟಾಕ್‌ಗಳ ತೀವ್ರ ಕುಸಿತ: ಒಂದೇ ದಿನದಲ್ಲಿ $27 ಶತಕೋಟಿ ಹಣ ಕಳೆದುಕೊಂಡ ವಿಶ್ವದ ಟಾಪ್‌ 10 ಶ್ರೀಮಂತರು: ಯಾರ್ಯಾರು ಎಷ್ಟೆಷ್ಟು ಹಣ ಕಳೆದುಕೊಂಡರು..? ಪಟ್ಟಿ ಇಲ್ಲಿದೆ

ಅಮೆರಿಕದ ಟೆಕ್ ಸ್ಟಾಕ್‌ಗಳು ತಿಂಗಳುಗಳಲ್ಲಿ ತಮ್ಮ ದೊಡ್ಡ ಕುಸಿತ ಅನುಭವಿಸಿದ ನಂತರ ವಿಶ್ವದ ಟಾಪ್‌ 10 ಶ್ರೀಮಂತರ ನಿವ್ವಳ ಮೌಲ್ಯ ಬುಧವಾರ ಒಮ್ಮೆಗೇ ಕರಗಿದೆ. ಬುಧವಾರ, ಫಿಚ್‌ನ ಅಮೆರಿಕ ಕ್ರೆಡಿಟ್ ರೇಟಿಂಗ್‌ನ ಡೌನ್‌ಗ್ರೇಡ್ ಸಾಮೂಹಿಕ ಮಾರಾಟಕ್ಕೆ ಕಾರಣವಾಯಿತು, ಇದು ಅಲ್ಟ್ರಾ-ಶ್ರೀಮಂತ ಬಿಲಿಯನೇರ್‌ಗಳ ಆಸ್ತಿ ಕರಗಿ ಹೋಗುವಂತೆ ಮಾಡಿತು. ನಾಸ್ಡಾಕ್ ಕಾಂಪೋಸಿಟ್ ಸೂಚ್ಯಂಕ ಬುಧವಾರ 2.1% ನಷ್ಟು … Continued