ನಮ್ಮ ಹಿಂದೆ ಓಡಾಡಿದವರೆಲ್ಲ ಈಗ ಮಂತ್ರಿಯಾಗಿ ಧಿಮಾಕಿನಿಂದ ಓಡಾಡುತ್ತಿದ್ದಾರೆ : ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ: ನಮ್ಮ ಹಿಂದೆ ಓಡಾಡಿದವರೆಲ್ಲ ಈಗ ಮಂತ್ರಿಯಾಗಿದ್ದಾರೆ. ಅವರ ಅಪ್ಪಂದಿರ ಜೊತೆ ನಾನು ಕೆಲಸ‌ ಮಾಡಿದವ. ಈಗ ಇವರು ನಮ್ಮ ಮುಂದೆ ಧಿಮಾಕು ತೋರಿಸಿಕೊಂಡು ಓಡಾಡುತ್ತಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಜನಸಂರ್ಪಕ ಸಭೆಯಲ್ಲಿ ಮಾತನಾಡಿದ ಅವರು, “ನೀವು ಚಿಂತೆ ಮಾಡುವುದು ಬೇಡ. ಒಮ್ಮೊಮ್ಮೆ ಮಂತ್ರಿ ಆಗಲು … Continued

20 ವರ್ಷಗಳಲ್ಲಿ ಕೆಎಂಎಫ್ ನಮಗೆ ತುಪ್ಪ ಪೂರೈಸಿರುವುದು ಒಮ್ಮೆ ಮಾತ್ರ : ಕೆಎಂಎಫ್‌ ಹೇಳಿಕೆಗೆ ಟಿಟಿಡಿ ಉತ್ತರ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ ಅವರು, ಕೆಎಂಎಫ್ ಕಳೆದ ಇಪ್ಪತ್ತು ವರ್ಷಗಳಿಂದ ಲಡ್ಡು ತಯಾರಿಕೆಗೆ ತುಪ್ಪವನ್ನು ಸರಬರಾಜು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಕೆಎಂಎಫ್ ಹಲವಾರು ವರ್ಷಗಳಿಂದ ಪ್ರಸಾದ ಲಡ್ಡುಗಳನ್ನು ತಯಾರಿಸಲು ಟಿಟಿಡಿಗೆ ತುಪ್ಪವನ್ನು ಪೂರೈಸುತ್ತಿದೆ ಎಂದು ಕೆಎಂಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಹೇಳಿರುವುದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಲವು … Continued

“ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ಪೊಲೀಸರಿಂದ ಸಾಧ್ಯವಿಲ್ಲ”: ಶಾಂತಿ ಕಾಪಾಡಿ ಎಂದು ಹರ್ಯಾಣ ಸಿಎಂ ಮನವಿ

ನವದೆಹಲಿ: ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನು ರಕ್ಷಿಸಲು ಪೊಲೀಸರಿಂದ ಸಾಧ್ಯವಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್ ಅವರು ಬುಧವಾರ ಹೇಳಿದ್ದಾರೆ. ಮತ್ತು ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದಾರೆ. ಹರ್ಯಾಣ ಸೋಮವಾರದಿಂದ ಆರು ಜೀವಗಳ ಸಾವಿಗೆ ಕಾರಣವಾದ ಕೋಮು ಘರ್ಷಣೆಗೆ ಸಾಕ್ಷಿಯಾಗಿದೆ. ಹಿಂಸಾಚಾರ ಇದೀಗ ರಾಷ್ಟ್ರ ರಾಜಧಾನಿಯ ಹೆಬ್ಬಾಗಿಲು ವರೆಗೂ ತಲುಪಿದೆ. … Continued

ಕಾರ್ಕಳ: ನೈತಿಕ ಪೊಲೀಸ್ ಗಿರಿ ಆರೋಪ – ಐವರ ಬಂಧನ

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ‌ ಹೆಸರಾಂತ ಕಾಲೇಜಿನ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಭಾನುವಾರ ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4:30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ವಾಪಸ್ಸಾಗುತ್ತಿದ್ದರು. ಮಾಳ ಎಸ್ ಕೆ ಬಾರ್ಡರ್ … Continued

ವಾಟ್ಸಾಪ್‌ ಚಾಟ್‌ನಲ್ಲಿ 60 ಸೆಕೆಂಡುಗಳ ವೀಡಿಯೊ ರೆಕಾರ್ಡ್‌ ಮಾಡಿ ಕಳುಹಿಸಬಹುದು…ಅದು ಹೇಗೆ? : ಇಲ್ಲಿದೆ ವಿವರ

ಮೆಟಾ ಒಡೆತನದ ತ್ವರಿತ ಮೆಸೇಜಿಂಗ್ ಅಪ್ಲಿಕೇಶನ್‌ ವಾಟ್ಸಾಪ್‌ ತನ್ನ ಬಳಕೆದಾರರಿಗೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಅಂತೆಯೇ, ತನ್ನ ಆಂಡ್ರಾಯ್ಡ್‌ ಬಳಕೆದಾರರಿಗೆ ಹೊಸ ವೀಡಿಯೊ ಮೆಸೇಜ್ ಮಾಡುವ ವೈಶಿಷ್ಟ್ಯವನ್ನೂ ವಾಟ್ಸಾಪ್ ಪರಿಚಯಿಸಿದೆ. ಇದು ಸಣ್ಣ ವೀಡಿಯೊ ಮೂಲಕ ಸಂದೇಶ ಕಳುಹಿಸಬಹುದಾದ ವೈಶಿಷ್ಟ್ಯವಾಗಿದೆ. ಈ ಫಿಚರ್‌ನಲ್ಲಿ ವಾಟ್ಸಾಪ್ ಬಳಕೆದಾರರು ನೇರವಾಗಿಯೇ ಚಾಟ್‌ನಲ್ಲಿಯೇ ವೀಡಿಯೊ ರೆಕಾರ್ಡ್‌ ಮಾಡಿ ಅದನ್ನು … Continued

ಬಾಲಿವುಡ್‌ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆ, ಆತ್ಮಹತ್ಯೆಯ ಶಂಕೆ

ಮುಂಬೈ: ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರ್ಜಾತ್‌ನಲ್ಲಿರುವ ಅವರ ಎನ್‌ಡಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ ದೇಸಾಯಿ ಅವರು 58 ನೇ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ದೇಸಾಯಿ ಅವರು ಕರ್ಜತ್‌ನಲ್ಲಿರುವ ತಮ್ಮ ಸ್ಟುಡಿಯೋದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುದ್ದಿ … Continued

ಆಸ್ಪತ್ರೆಯಲ್ಲಿ ಯುವಕ ಸಾವು: ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದಿರುವ ಶಂಕೆ, 78 ಮಂದಿ ಅಸ್ವಸ್ಥ

ಚಿತ್ರದುರ್ಗ: ವಾಂತಿ-ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಮೃತಪಟ್ಟಿದ್ದು, ಈತನೂ ತಾಲೂಕಿನ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಲುಷಿತ ನೀರು ಸೇವೆನೆಯಿಂದ ಅಸ್ವಸ್ಥರ ಸಂಖ್ಯೆ 78ಕ್ಕೆ ಏರಿಕೆಯಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಯುವಕ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾನೆ. ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಶಂಕಿತರ ಸಂಖ್ಯೆ ಮೂರಕ್ಕೇರಿದೆ ಎಂದು ವರದಿಯಾಗಿದೆ. … Continued

ಸಾಗರ: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್‌ ಡಿಕ್ಕಿ ; ವಿದ್ಯುತ್‌ ಶಾಕ್‌ ಹೊಡೆದು 35 ಪ್ರಯಾಣಿಕರು ಅಸ್ವಸ್ಥ

ಶಿವಮೊಗ್ಗ: ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ವಿದ್ಯುತ್‌ ಆಘಾತಕ್ಕೆ ಒಳಗಾಗಿ ಅದರಲ್ಲಿದ್ದ ಪ್ರಯಾಣಿಕರು ಅಸ್ವಸ್ಥರಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಸಮೀಪ ನಡೆದಿದೆ ಎಂದು ಬುಧವಾರ ವರದಿಯಾಗಿದೆ. ಖಾಸಗಿ ಬಸ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕೂಡಲೇ ವಿದ್ಯುತ್‌ ಕಂಬ ಮುರಿದು ರಸ್ತೆಗೆ ಬಿದ್ದಿದೆ. … Continued

ಕಾರವಾರ: ಮೊಬೈಲ್ ಚಾರ್ಜರ್ ವೈರ್ ಬಾಯಿಗೆ ಹಾಕಿಕೊಂಡ 8 ತಿಂಗಳ ಮಗು ಸಾವು

ಕಾರವಾರ: ಸ್ವಿಚ್ ಬೋರ್ಡಿಗೆ ಹಾಕಿದ್ದ ಮೊಬೈಲ್ ಚಾರ್ಜರ್ ವೈಯರ್ ಅನ್ನು ಮಗು ಬಾಯಲ್ಲಿ ಕಚ್ಚಿದ ನಂತರ ವಿದ್ಯುತ್ ಪ್ರಹರಿಸಿ 8 ತಿಂಗಳ ಮಗು ಸಾವಿಗೀಡಾದ ಘಟನೆ ಕಾರವಾರ ತಾಲ್ಲೂಕಿನ ಸಿದ್ದರದಲ್ಲಿ ಇಂದು, ಬುಧವಾರ ನಡೆದಿದೆ. ಸಿದ್ದರದ ಸಂತೋಷ ಕಲ್ಗುಟಕರ, ಸಂಜನಾ ಕಲ್ಗುಟಕರ ದಂಪತಿಯ ಏಂಟು ತಿಂಗಳ ಹೆಣ್ಣು ಮಗು ಸಾನಿಧ್ಯ ಎಂಬ ಪುಟ್ಟ ಮಗು ಮೃತಪಟ್ಟಿದೆ. … Continued

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಮಾಡಿಕೊಡಲಾಗಿದೆ. ಈಗ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು … Continued