ಐಬಿಪಿಎಸ್‌ನಿಂದ 3049 ಬ್ಯಾಂಕ್‌ ಪಿಒ, ಎಂಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್‌ಗಳಲ್ಲಿ ನೇಮಕಾತಿ ಮಾಡಬೇಕಾದ ಸಂಭಾವ್ಯ 3049 ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್‌ ಟ್ರೈನಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಪರೀಕ್ಷೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ ಅರ್ಹತೆಗಳು : ದಿನಾಂಕ 01-08-2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ … Continued

ಸಾವಿರಾರು ತೈವಾನೀಸ್ ಮಹಿಳೆಯರು ಅಂಡಾಣುಗಳನ್ನು ಘನೀಕರಿಸಿ ಕಾಯ್ದಿರಿಸುತ್ತಿದ್ದಾರೆ – ಕಾರಣ…?

ಸಾವಿರಾರು ತೈವಾನೀಸ್ ಮಹಿಳೆಯರು ತಮ್ಮ ಅಂಡಾಣುಗಳನ್ನು ಫ್ರೀಜ್ (ಹೆಪ್ಪುಗಟ್ಟಿಸಿ) ಮಾಡಿ ಕಾಯ್ದಿಟ್ಟುಕೊಳ್ಳುವ ಮೂಲಕ ಸಂತಾನೋತ್ಪತ್ತಿ ತಂತ್ರಜ್ಞಾನದ ಪ್ರಗತಿಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. 35 ಮತ್ತು 39 ರ ನಡುವಿನ ವಯಸ್ಸಿನ ಮಹಿಳೆಯರಲ್ಲಿ ಈ ಪ್ರವೃತ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಅವರು ಸಂತಾನದ ತಮ್ಮ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಮತ್ತು ನಂತರದ ಜೀವನದಲ್ಲಿ ಮಗುವನ್ನು ಪಡೆಯುವ ಸಲುವಾಗಿ ತಮ್ಮ ಅಂಡಾಣುಗಳನ್ನು ಫ್ರೀಜ್ … Continued

ದೆಹಲಿ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ: ಸುಷ್ಮಾ ಸ್ವರಾಜ್ ಪುತ್ರಿ ಕಾರ್ಯದರ್ಶಿಯಾಗಿ ನೇಮಕ

ನವದೆಹಲಿ: ಪಕ್ಷದ ದಿಗ್ಗಜ ನಾಯಕಿಯಾಗಿದ್ದ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸೇರಿದಂತೆ ಹಲವು ಯುವ ಮುಖಗಳನ್ನು ಹೊಂದಿರುವ ದೆಹಲಿ ಬಿಜೆಪಿ ಪದಾಧಿಕಾರಿಗಳ ಹೊಸ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಹರ್ಷ್ ಮಲ್ಹೋತ್ರಾ, ಯೋಗೇಂದ್ರ ಚಂದೋಲಿಯಾ ಮತ್ತು ಕಮಲ್ಜೀತ್ ಸೆಹ್ರಾವತ್ ಅವರನ್ನು ಹೊಸದಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ … Continued

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆಗೆ ಲೋಕಸಭೆ ಅನುಮೋದನೆ

ನವದೆಹಲಿ: ಶಿಕ್ಷಣ ಸಂಸ್ಥೆಗೆ ಪ್ರವೇಶ, ಚಾಲನಾ ಪರವಾನಗಿ ನೀಡಿಕೆ, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಮದುವೆ ನೋಂದಣಿ ಅಥವಾ ಸರ್ಕಾರದ ನೇಮಕಾತಿಗೆ ಜನನ ಪ್ರಮಾಣಪತ್ರವನ್ನು ಏಕೈಕ ದಾಖಲೆಯಾಗಿ ಬಳಸಲು ಅನುಮತಿಸುವ ಮಹತ್ವದ ಮಸೂದೆಯನ್ನು ಲೋಕಸಭೆ ಸೋಮವಾರ ಅಂಗೀಕರಿಸಿದೆ. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ-2023 ನೋಂದಾಯಿತ ಜನನ ಮತ್ತು ಮರಣಗಳ ರಾಷ್ಟ್ರೀಯ ಮತ್ತು ರಾಜ್ಯ … Continued

ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ ಅಂಗೀಕರಿಸಿದ ಸಂಸತ್ತು

ನವದೆಹಲಿ: ಸಂಸತ್ತು ಮಂಗಳವಾರ ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023 ಅನ್ನು ಅಂಗೀಕರಿಸಿತು, ಇದು ಸಹಕಾರಿಗಳ ಕಾರ್ಯನಿರ್ವಹಣೆಯನ್ನು ಹೆಚ್ಚು ಪಾರದರ್ಶಕವಾಗಿಸುವ ಮೂಲಕ, ನಿಯಮಿತ ಚುನಾವಣೆಗಳ ವ್ಯವಸ್ಥೆಯನ್ನು ಪರಿಚಯಿಸುವ ಮೂಲಕ ಸಹಕಾರ ಬಲಪಡಿಸಲು ಪ್ರಯತ್ನಿಸುತ್ತದೆ. ಜುಲೈ 25, 2023 ರಂದು ಲೋಕಸಭೆಯಿಂದ ಅಂಗೀಕರಿಸಲ್ಪಟ್ಟ ಮಸೂದೆಯನ್ನು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಸಹಕಾರ ಸಚಿವ ಬಿ.ಎಲ್. … Continued

ಮೃತಪಟ್ಟು 10 ವರ್ಷಗಳ ನಂತರ ಮಹಿಳೆಗೆ ಬಂತು ಬರೋಬ್ಬರಿ 7.56 ಕೋಟಿ ರೂ. ತೆರಿಗೆ ನೋಟಿಸ್…!

ಬೇತುಲ್ : ಮಧ್ಯಪ್ರದೇಶದಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ಹತ್ತು ವರ್ಷಗಳ ಹಿಂದೆ ಮೃತಪಟ್ಟ ಮಹಿಳೆಯೊಬ್ಬರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಸುಮಾರು 7.56 ಕೋಟಿ ತೆರಿಗೆ ನೋಟಿಸ್ ನೀಡಿದೆ….! ಉಷಾ ಸೋನಿ ಅವರ ಹೆಸರಿನಲ್ಲಿ ಸುಮಾರು 7.56 ಕೋಟಿ ರೂಪಾಯಿ ತೆರಿಗೆ ನೋಟಿಸ್ ಬಂದಿದೆ ಎಂದು ಉಷಾ ಸೋನಿ ಅವರ ಕುಟುಂಬವು ಬೇತುಲ್ ಪೊಲೀಸ್ ಅಧೀಕ್ಷಕರಿಗೆ … Continued

ಆಗಸ್ಟ್​ 3ರಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್​ 3ರಂದು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅದೇ ದಿನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ … Continued

ಮಣಿಪುರದಲ್ಲಿ ಸಾಂವಿಧಾನಿಕ ಯಂತ್ರಗಳ ಸಂಪೂರ್ಣ ಸ್ಥಗಿತ: ಸುಪ್ರೀಂ ಕೋರ್ಟ್

ನವದೆಹಲಿ: ಮಣಿಪುರದಲ್ಲಿ ತನಿಖೆಯ “ಆಲಸ್ಯ”ದ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ ಮತ್ತು ರಾಜ್ಯದಲ್ಲಿ “ಕಾನೂನು ಮತ್ತು ಸುವ್ಯವಸ್ಥೆ ಯಂತ್ರದ ಸಂಪೂರ್ಣ ಸ್ಥಗಿತವಾಗಿದೆ ಎಂದು ಹೇಳಿದೆ. ಗಮನಾರ್ಹ ಸಮಯ ಕಳೆದರೂ ಯಾವುದೇ ಬಂಧನಗಳಿಲ್ಲ. ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯು ಸಾಂವಿಧಾನಿಕ ಯಂತ್ರಗಳ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಗಮನಿಸಿದ … Continued

ಎಎಪಿಗೆ ಹಿನ್ನಡೆ : ದೆಹಲಿ ಆಡಳಿತಾತ್ಮಕ ಸೇವಾ ಮಸೂದೆ ವಿಚಾರದಲ್ಲಿ ಕೇಂದ್ರಕ್ಕೆ ಬೆಂಬಲಿಸಿದ ಬಿಜೆಡಿ

ನವದೆಹಲಿ: ದೆಹಲಿ ಸೇವಾ ಮಸೂದೆಯ ವಿರುದ್ಧದ ಹೋರಾಟದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಒಡಿಶಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಸಂಸತ್ತಿನಲ್ಲಿ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದೆ. ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಮಂಡಿಸಿದ ಅವಿಶ್ವಾಸ ನಿರ್ಣಯವನ್ನೂ ಸಹ ಬಿಜೆಡಿ ವಿರೋಧಿಸುತ್ತದೆ ಎಂದು ಮೂಲಗಳು ತಿಳಿಸಿವೆ. … Continued

ಉಡುಪಿ ಕಾಲೇಜಿನ ವೀಡಿಯೊ ಪ್ರಕರಣ: ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಭವಿಸಲ್ಲ- ಸಿಎಂ ಸಿದ್ದರಾಮಯ್ಯ

ಮಂಗಳೂರು : ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥನಿಯೊಬ್ಬಳ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವೈ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್‌ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಹೀಗಿರುವಾಗ ಈ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು, ಸೋಮವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ … Continued