ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಡಿ ಎಂಬ ವಿಪಕ್ಷಗಳ ಮೈತ್ರಿಕೂಟದ ಸಲಹೆ ನಡುವೆಯೂ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡ ಶರದ್‌ ಪವಾರ್‌

ಪುಣೆ: ವಿರೋಧ ಪಕ್ಷಗಳ ಮೈತ್ರಿಕೂಟದ ಹಿರಿಯ ನಾಯಕರಲ್ಲಿ ಒಬ್ಬರಾದ ಶರದ್ ಪವಾರ್ ಅವರು ಇಂದು, ಸೋಮವಾರ ಮಹಾರಾಷ್ಟ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದು, ಕಾರ್ಯಕ್ರಮಕ್ಕೆ ಹೋಗದಂತೆ ಒತ್ತಾಯಿಸಿದ ಅವರ ಮಿತ್ರಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರದ ಮಧ್ಯೆ, ಪುಣೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಹಾಗೂ ಶರದ್‌ … Continued

ಹರ್ಯಾಣದ ನುಹ್, ಗುರುಗ್ರಾಮದಲ್ಲಿ ಗುಂಪು ಘರ್ಷಣೆಯಲ್ಲಿ ಇಮಾಮ್ ಸೇರಿದಂತೆ 5 ಸಾವು

ನವದೆಹಲಿ: ಹರ್ಯಾಣದ ನುಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಧಾರ್ಮಿಕ ಮೆರವಣಿಗೆ ವೇಳೆ ಸೋಮವಾರ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು, ಒಬ್ಬ ನಾಗರಿಕ ಮತ್ತು ಇಮಾಮ್ ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ಮಾತನಾಡಿ, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಘರ್ಷಣೆಯಲ್ಲಿ ಐದು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಸದ್ಯ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳ 3ರಿಂದ 5ರ ವರೆಗೆ ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ ಎಂದು ಮುನ್ಸೂಚನೆ ನೀಡಿದೆ ಹಾಗೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ … Continued

ಸೌಜನ್ಯಳಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥಸ್ವಾಮಿ ದರ್ಶನ ಮಾಡಕೂಡದು ಅನಿಸುತ್ತಿದೆ : ನಟ ದುನಿಯಾ ವಿಜಯ

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದ ಕುರಿತು ಕನ್ನಡದ ನಟ ದುನಿಯಾ ವಿಜಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು​ ಟ್ವೀಟ್​ ಮಾಡಿರುವ ಅವರು, “ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಟ್ವೀಟ್​ನಲ್ಲಿ … Continued

ಆಗಸ್ಟ್​ 5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ

ಬೆಂಗಳೂರು: ಆಗಸ್ಟ್‌ 5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಎಂದು ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಾಸರಿ ಬಳಸುವ ಯೂನಿಟ್‌ ವಿದ್ಯುತ್ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‌ಗೆ ಮಾತ್ರ … Continued

ತಾಯಿ ಮೊಬೈಲ್‌ ಚಾರ್ಜರ್ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮಗ

ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗ ಆತ್ಮಹತ್ಯೆ ಮಾಡಿಕೊಂಡ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿ ಎಂಬಲ್ಲಿ ನಡೆದಿದೆ. ಪಾವಗಡದ ಶಾಂತಿ ಎಸ್ಎಸ್ ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಹುಡುಗ. ಈತ ಆಶಾ ಕಾರ್ಯಕರ್ತೆ ವರಲಕ್ಷಮ್ಮ ಎಂಬವರ … Continued

ಇಂದಿನಿಂದ ನಂದಿನಿ ಹಾಲು, ಮೊಸರು ಬೆಲೆಯಲ್ಲಿ ಏರಿಕೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕೆಎಂಎಫ್‌  ನಂದಿನಿ ಹಾಲು ಹಾಗೂ ಮೊಸರಿನ ದರದಲ್ಲಿ ಹೆಚ್ಚಳವಾಗಿದೆ. ನಂದಿನಿ ಹಾಲು ಪ್ರತೀ ಲೀಟರ್‍ ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಏರಿಕೆ ಯಾಗಿದ್ದು, ಆಗಸ್ಟ್ 1 ರಿಂದಲೇ ಈ ದರ ಅನ್ವಯವಾಗಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಧ ಲೀಟರ್‌ ಹಾಲಿಗೆ 10 ಎಂಎಲ್‌ ಹಾಲನ್ನು … Continued

19-ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ….

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ದೇಶಾದ್ಯಂತ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿವೆ. ದೆಹಲಿಯಲ್ಲಿ 100 ರೂಪಾಯಿ ಸಮೀಪ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಇತರ ಮಹಾನಗರಗಳಲ್ಲಿ ಸುಮಾರು 93 ರೂಪಾಯಿಗಳ ಕಡಿತವನ್ನು ಮಾಡಲಾಗಿದೆ. ಈಗ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ 1680 ರೂ.ಗಳಿಗೆ ಲಭ್ಯವಿರುತ್ತದೆ, ಇದುವರೆಗೆ 1780 ರೂ.ಗಳ ದರವಿತ್ತು. ಈ … Continued

ಭೂಮಿಯ ಕಕ್ಷೆಯಿಂದ ಹೊರಟು ಚಂದ್ರನ ಕಡೆಗೆ ಪ್ರಯಾಣ ಆರಂಭಿಸಿದ ಚಂದ್ರಯಾನ-3 ಬಾಹ್ಯಾಕಾಶ ನೌಕೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಂಗಳವಾರ ಚಂದ್ರಯಾನ 3 – ಚಂದ್ರನ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಟ್ರಾನ್ಸ್‌ಲೂನಾರ್ ಕಕ್ಷೆಗೆ ಸೇರಿಸಿದೆ. “ಚಂದ್ರಯಾನ-3 ಭೂಮಿಯ ಸುತ್ತ ತನ್ನ ಕಕ್ಷೆಯನ್ನು ಪೂರ್ಣಗೊಳಿಸುತ್ತದೆ ಮತ್ತು ಚಂದ್ರನ ಕಡೆಗೆ ಹೋಗುತ್ತದೆ. ISTRAC ನಲ್ಲಿ ನಡೆಸಿದ ಯಶಸ್ವಿ ಪೆರಿಜಿ-ಫೈರಿಂಗ್, ಇಸ್ರೋ (ISRO) ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್ ಕಕ್ಷೆಯಲ್ಲಿ ಇಟ್ಟಿದೆ. ಚಂದ್ರಯಾನ-3 … Continued

ಥಾಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ಬಳಸುವ ಗಿರ್ಡರ್ ಲಾಂಚರ್ ಕುಸಿದು 16 ಮಂದಿ ಸಾವು

ಮುಂಬೈ: ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರವು ಕುಸಿದು ಬಿದ್ದು ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ. ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ … Continued