ಪಾಕಿಸ್ತಾನದ ಇತಿಹಾಸದಲ್ಲೇ ಮೊದಲ ಬಾರಿಗೆ 300 ರೂ. ದಾಟಿದ ಪೆಟ್ರೋಲ್, ಡೀಸೆಲ್ ಬೆಲೆ

ಇಸ್ಲಾಮಾಬಾದ್‌ : ಪಾಕಿಸ್ತಾನದಲ್ಲಿ ಗಗನಕ್ಕೇರುತ್ತಿರುವ ವಿದ್ಯುತ್ ಶುಲ್ಕದ ಆಕ್ರೋಶದ ನಡುವೆ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇತಿಹಾಸದಲ್ಲಿ ಮೊದಲ ಬಾರಿಗೆ 300 ರೂಪಾಯಿಗಳ ಗಡಿ ದಾಟಿದೆ. ಇದು ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಜನರಿಗೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಪ್ರಧಾನ ಮಂತ್ರಿ ಅನ್ವರುಲ್ ಹಕ್ ಕಾಕರ್ ನೇತೃತ್ವದ ಉಸ್ತುವಾರಿ ಸರ್ಕಾರವು ಗುರುವಾರ ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ (ಎಚ್‌ಎಸ್‌ಡಿ) ಬೆಲೆಯನ್ನು ಲೀಟರ್‌ಗೆ ಕ್ರಮವಾಗಿ 14.91 ರೂ. ಮತ್ತು 18.44 ರೂ.ಗಳಷ್ಟು ಹೆಚ್ಚಿಸಿದೆ. ಈ ಏರಿಕೆಯೊಂದಿಗೆ, ಈಗ ಪೆಟ್ರೋಲ್ ಬೆಲೆ 305.36 ರೂ.ಗಳಾದರೆ ಡೀಸೆಲ್ ಬೆಲೆ 311.84 ರೂ.ಗಳಿಗೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಬೆಲೆಗಳ ಹೆಚ್ಚುತ್ತಿರುವ ಪ್ರವೃತ್ತಿ ಮತ್ತು ವಿನಿಮಯ ದರದ ವ್ಯತ್ಯಾಸಗಳಿಂದಾಗಿ ಪೆಟ್ರೋಲಿಯಂ ಉತ್ಪನ್ನಗಳ ಪ್ರಸ್ತುತ ಗ್ರಾಹಕ ಬೆಲೆಗಳನ್ನು ಪರಿಷ್ಕರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಪಾಕಿಸ್ತಾನ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಇತ್ತೀಚೆಗೆ ವಿದ್ಯುತ್ ಬಿಲ್ ಹೆಚ್ಚಳದ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಮುಲ್ತಾನ್, ಲಾಹೋರ್ ಮತ್ತು ಕರಾಚಿ ಸೇರಿದಂತೆ ಅನೇಕ ಸ್ಥಳಗಳಲ್ಲಿ ಬೃಹತ್‌ ಪ್ರತಿಭಟನೆಗಳನ್ನು ಕಂಡವು, ಅಲ್ಲಿ ಜನರು ತಮ್ಮ ಬಿಲ್ಲುಗಳನ್ನು ಸುಟ್ಟುಹಾಕಿದರು.
ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಸರ್ಕಾರ ಹೇಳಿದೆ. ಈ ವಾರದ ಆರಂಭದಲ್ಲಿ, ಮಧ್ಯಂತರ ಪ್ರಧಾನಿ ಕಾಕರ್ ಅವರು ಈ ವಿಷಯದ ಬಗ್ಗೆ ತುರ್ತು ಸಭೆ ನಡೆಸಿದರು ಮತ್ತು ವಿದ್ಯುತ್ ಬಿಲ್‌ಗಳನ್ನು ಕಡಿತಗೊಳಿಸಲು “ಕಾಂಕ್ರೀಟ್ ಕ್ರಮಗಳನ್ನು” ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆದರೆ, ಇದುವರೆಗೆ ಯಾವುದೇ ಪರಿಹಾರ ಕಂಡುಬಂದಿಲ್ಲ.

ಇಂದಿನ ಪ್ರಮುಖ ಸುದ್ದಿ :-   ಕೆನಡಾ ಪ್ರಧಾನಿಯಿಂದ ಮತ್ತೊಂದು ಎಡವಟ್ಟು : ನಾಜಿ ಹೋರಾಟಗಾರನ ಗೌರವಿಸಿದ ನಂತರ ಯಹೂದಿಗಳ ಕ್ಷಮೆಯಾಚಿಸಿದ ಕೆನಡಾ ಸಂಸತ್ತಿನ ಸ್ಪೀಕರ್

ರಾಜಕೀಯ ಅಸ್ಥಿರತೆಯ ಜೊತೆಗೆ ಪಾಕಿಸ್ತಾನವು ತನ್ನ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಅನುಮೋದಿಸಲಾಗಿದೆ. ಪಾಕಿಸ್ತಾನದಲ್ಲಿ ಹಣದುಬ್ಬರವು ಪ್ರಸ್ತುತ ಶೇಕಡ 21.3 ರ ದಾಖಲೆಯ ಗರಿಷ್ಠ ಮಟ್ಟದಲ್ಲಿದೆ. ಕಳೆದ ವರ್ಷದಲ್ಲಿ ಅಮೆರಿಕದ ಡಾಲರ್ ಎದುರು ಪಾಕಿಸ್ತಾನದ ರೂಪಾಯಿ ಮೌಲ್ಯದ ಅರ್ಧದಷ್ಟು ಕಳೆದುಕೊಂಡಿದೆ. ದೇಶದ ವಿದೇಶಿ ವಿನಿಮಯ ಮೀಸಲು ಸುಮಾರು $10 ಬಿಲಿಯನ್‌ನಷ್ಟು ಕಡಿಮೆ ಮಟ್ಟದಲ್ಲಿದೆ. ಈಗ ಇಂಧನ ಬೆಲೆಗಳ ಹೆಚ್ಚಳವು ಪಾಕಿಸ್ತಾನದ ಜನರ ಮೇಲೆ ವಿನಾಶಕಾರಿ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement