ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್‌ 2 ರಿಂದ 7ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆರಾಯ ಸೆಪ್ಟೆಂಬರ್‌ ತಿಂಗಳಲ್ಲಿ ಕರುಣೆ ತೋರುವ ಸಾಧ್ಯತೆಯಿದೆ. ಸೆಪ್ಟೆಂಬರ್‌ 2ರ ಬಳಿಕ ಕರ್ನಾಟಕ ಸೇರಿದಂತೆ ದೇಶಾದ್ಯಂತ ಮುಂಗಾರು ಮಾರುತಗಳ ಸ್ಥಿತಿ ಸುಧಾರಿಸಲಿದ್ದು, ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸೆಪ್ಟೆಂಬರ್‌ 2ರ ನಂತರ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಮೇಲ್ಮೈ ಸುಳಿಗಾಳಿ ಪರಿಸ್ಥಿತಿಯು ಕ್ರಮೇಣ ವಾಯಭಾರ ಕುಸಿತವಾಗಿ ಮಾರ್ಪಡುವ ಸಾಧ್ಯತೆಯಿದೆ. ಇದರಿಂದ ದಕ್ಷಿಣ ಭಾರತ, ಮಧ್ಯ ಭಾರತ ಹಾಗೂ ಪೂರ್ವ ಭಾರತದ ಹಲವು ಭಾಗಗಳಿಗೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement