ಇನ್ಮುಂದೆ ವರ್ಗಾವಣೆಗೆ ಸಿಎಂ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅನುಮತಿ ಕಡ್ಡಾಯ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮುಖ್ಯಮಂತ್ರಿಗಳ ಅನುಮತಿ ಪಡೆದ ನಂತರವೇ ಇಲಾಖಾವಾರು ವರ್ಗಾವಣೆ ಮಾಡಬೇಕು. ಯಾವುದೇ ವರ್ಗಾವಣೆ ಮಾಡುವುದಿದ್ದರೂ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಅದರಲ್ಲಿ ತಿಳಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ಈ ಸುತ್ತೋಲೆ ಹೊರಡಿಸಿದ್ದು, ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯದೆ ವರ್ಗಾವಣೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಅನುಮತಿ ಪಡೆಯದೆ ವರ್ಗಾವಣೆ ನಡೆದರೆ ಅದಕ್ಕೆ ಸರ್ಕಾರದ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಇಲಾಖೆಯ ಮುಖ್ಯಸ್ಥರೇ ನೇರವಾಗಿ ಹೊಣೆಗಾರರಾಗುತ್ತಾರೆ. ವರ್ಗಾವಣೆ ಮಾಡಿದ ನಂತರ ಮುಖ್ಯಮಂತ್ರಿಗಳ ಅನುಮತಿ ಪಡೆಯುವ ಅವಕಾಶ ಇಲ್ಲ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಗೋಕಾಕ: ಸೈನಿಕನಿಗೆ ಗುಂಡು ಹಾರಿಸಿದ ಇನ್ನೊಬ್ಬ ಸೈನಿಕ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement