ಎನ್‌ಡಬ್ಲ್ಯು ಕೆಆರ್‌ಟಿಸಿಯಲ್ಲಿ ಟಿಕೆಟಿಗೆ ಹಣ ಪಾವತಿಸಲು ಯುಪಿಐ ವ್ಯವಸ್ಥೆ…!

ಹುಬ್ಬಳ್ಳಿ : ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರಿಗೆ ಇಲಾಖೆಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಇನ್ನುಮುಂದೆ ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು UPI ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ಪ್ರಾರಂಭ ಮಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು , ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಟಿಕೆಟ್‌ಗಳಿಗೆ ನಗದು ರಹಿತ ವಹಿವಾಟುಗಳನ್ನು ಉತ್ತೇಜಿಸಲು ಪ್ರಾಯೋಗಿಕ ಆಧಾರದ ಮೇಲೆ UPI ಆಧಾರಿತ ಪಾವತಿಗಳನ್ನು ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಸಂಕಲ್ಪ ಜನಸ್ನೇಹಿ ಮತ್ತು ಜನಪರ ಆಡಳಿತದ ಭಾಗವಾಗಿ ಇದನ್ನು ಪ್ರಾರಂಭಿಸಲಾಗಿದೆ. ಸದ್ಯ ಈ ಡಿಜಿಟಲ್‌ ಪಾವತಿ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ NWKRTC ಬಸ್‌ಗಳಲ್ಲಿ ಮಾತ್ರ ಜಾರಿ ಮಾಡಲಾಗಿದ್ದು, ಇದು ಯಶಸ್ವಿಯಾದರೆ, ಉಳಿದ ನಿಗಮಗಳಿಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ಅನುಷ್ಠಾನಗೊಳ್ಳುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement