10 ಐಪಿಎಸ್​​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ತಕ್ಷಣದಿಂದಲೇ ಜಾರಿಗೆ ಬರುವಂತೆ 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಸಿಐಡಿ ಪೊಲೀಸ್ ವರಿಷ್ಠಾಧಿಕಾಯಾಗಿ ಪೃಥ್ವಿಕ್ ಶಂಕರ ಹಾಗೂ ಕನಿಕಾ ಸಿಕ್ರಿವಾಲ್ ಅವರನ್ನು ನೇಮಿಸಲಾಗಿದೆ. ಗುಂಜನ್ ಆರ್ಯ ಹಾಗೂ ಕುಶಾಲ್ ಚೌಕ್ಸೆ ಅವರನ್ನು ಗುಪ್ತಚರ ಇಲಾಖೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜನೆ ಮಾಡಲಾಗಿದೆ. ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಸಿದ್ದಾರ್ಥ ಗೋಯಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ರೋಹನ್ ಜಗದೀಶ ಅವರನ್ನು ನೇಮಿಸಲಾಗಿದೆ.
ಶಿವಾಂಶು ರಜಪೂತ್ ಅವರನ್ನು ಬೆಂಗಳೂರಿನ ಸಿಸಿಟಿ (ಸೆಂಟರ್ ಫಾರ್ ಕೌಂಟರ್ ಟೆರರಿಸಂ) ನ ಭಯೋತ್ಪಾದನಾ ನಿಗ್ರಹ ಕೇಂದ್ರದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಜಿತೇಂದ್ರ ಕುಮಾರ ದಯಾಮ ಅವರನ್ನು ಉಡುಪಿ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಕಮಾಂಡ್ 1ನೇ ಬೆಟಾಲಿಯನ್ ಗೆ ದೀಪನ್ ಎಂ.ಎನ್ ಅವರನ್ನು ನೇಮಕ ಮಾಡಲಾಗಿದೆ. ಮಿಥುನ್ ಎಚ್.ಎನ್ ಅವರನ್ನು ಬೆಂಗಳೂರಿನ ವೈರ್‌ಲೆಸ್‌ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಪ್ರಮುಖ ಸುದ್ದಿ :-   ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement