ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಜೋರಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು ಯೆಲ್ಲೊ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ , ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement