ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ಅವರ ಮೇಲೆ ದಾಳಿ ನಡೆಸಿದೆ. ಆನೆಯನ್ನು ಕಾಡಿಗಟ್ಟಲು ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಪಟಾಕಿ ಸಿಡಿಸುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳಿಯರು ಸ್ಥಳಕ್ಕೆ ಭೇಟಿ ನೀಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.ಮೂಡಿಗೆರೆಯಲ್ಲಿ 2 ವರ್ಷದಲ್ಲಿ 6ಕ್ಕೂ ಹೆಚ್ಚು ಜನ ಆನೆ ದಾಳಿಗೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement