ಚಿತ್ರದುರ್ಗ: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ತುಮಕೂರಿನವರಾದ ಶಂಶುದ್ದೀನ್‌, ತಬ್ರೇಜ್‌, ಮಲ್ಲಿಕಾ, ಕಲೀಲ್‌ ಎಂದು ಗುರುತಿಸಲಾಗಿದೆ. ನರ್ಗೀಸ್‌, ರೆಹಮಾನ್‌ ಹಾಗೂ ರೆಹಾನ್‌ ಎಂಬವರು ಗಾಯಗೊಂಡಿದ್ದಾರೆ. ಅವರು ಬೆಳಗಾವಿಯಿಂದ ತುಮಕೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.  ಸ್ಥಳಕ್ಕೆ ಆಗಮಿಸಿರುವ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆಯುತ್ತಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement