ಬೆಂಗಳೂರಲ್ಲಿ ಭಾರತದ ಮೊದಲ ಭೂಗತ ಟ್ರಾನ್ಸ್‌ಫಾರ್ಮರ್ ಲೋಕಾರ್ಪಣೆ

ಬೆಂಗಳೂರು: ಬೆಸ್ಕಾಂ ಮತ್ತು ಬಿಬಿಎಂಪಿ ಸಹಭಾಗಿತ್ವದಲ್ಲಿದೇಶದಲ್ಲೇ ಮೊದಲ ಬಾರಿಗೆ, ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನೆಲದಡಿಯಲ್ಲಿ 500 ಕೆವಿ ವಿದ್ಯುತ್‌ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಅವರು, ಈ ಭೂಗತ ವಿದ್ಯುತ್ ಪರಿವರ್ತಕವನ್ನು ಲೋಕಾರ್ಪಣೆ ಮಾಡಿದರು. ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ ಭಾಗಿಯಾಗಿದ್ದರು. ಬೆಂಗಳೂರಿನ … Continued

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ: 16 ದಿನಗಳ ಸುದೀರ್ಘ ವಿಚಾರಣೆ ಬಳಿಕ ತೀರ್ಪು ಕಾಯ್ದಿರಿಸಿದ ಸುಪ್ರೀಂ ಸುಪ್ರೀಂ ಕೋರ್ಟ್

ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಮುಕ್ತಾಯವಾಗಿದ್ದು, ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಮ್ಯಾರಥಾನ್ 16 ದಿನಗಳ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಸಂಜಯ ಕಿಶನ್ … Continued

ಎರಡು ವಿಧಾನಸಭಾ ಕ್ಷೇತ್ರಗಳ ಮತಪಟ್ಟಿಯಲ್ಲಿ ಹೆಸರು: ದೆಹಲಿ ಸಿಎಂ ಅರವಿಂದ ಕೆಜ್ರಿವಾಲ್‌ ಪತ್ನಿಗೆ ಸಮನ್ಸ್‌..

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಎರಡು ವೋಟರ್ ಐಡಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. ಸುನೀತಾ ಕೇಜ್ರಿವಾಲ್ ವಿರುದ್ಧದ ಆರೋಪವೆಂದರೆ ಅವರ ಹೆಸರು ಎರಡು ವಿಭಿನ್ನ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ದಾಖಲಾಗಿದೆ, ಇದು ಜನತಾ ಪ್ರಾತಿನಿಧ್ಯ ಕಾಯ್ದೆ (ಆರ್‌ಪಿಎ) … Continued

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್ ಖಾನ್-ಪುತ್ರಿ ಸುಹಾನಾ | ವೀಡಿಯೊ

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಮತ್ತು ಅವರ ಮಗಳು ಸುಹಾನಾ ಖಾನ್ ಅವರು ತಿರುಪತಿಗೆ ಭೇಟಿ ನೀಡಿದ್ದಾರೆ. ಶಾರುಖ್ ಖಾನ್ ಅವರು ತಮ್ಮ ಮಗಳು ಸುಹಾನಾ ಮತ್ತು ತಮಿಳಿನ ಖ್ಯಾತ ನಟಿ ನಯನತಾರಾ ಅವರೊಂದಿಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರೊಂದಿಗೆ ನಯನತಾರಾ ಪತಿ, ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ ಶಿವನ್ … Continued

ದೆಹಲಿಯಲ್ಲಿ G20 ಶೃಂಗಸಭೆ: ಯಾವ್ಯಾವ ವಿಶ್ವ ನಾಯಕರು ಪಾಲ್ಗೊಳ್ಳುತ್ತಾರೆ, ಯಾರೆಲ್ಲ ಪಾಲ್ಗೊಳ್ಳುವುದಿಲ್ಲ…

ನವದೆಹಲಿ: ಜಿ20 ಶೃಂಗಸಭೆ ಸೆಪ್ಟೆಂಬರ್ 8 ರಂದು ನವದೆಹಲಿಯಲ್ಲಿ ಆರಂಭವಾಗಲಿದೆ. ವಿಶ್ವದ 20 ಪ್ರಮುಖ ಆರ್ಥಿಕತೆಗಳ ಗುಂಪಿನ ನಾಯಕರು ಡಿಜಿಟಲ್ ರೂಪಾಂತರ, ಹವಾಮಾನ ಹಣಕಾಸು, ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ಮತ್ತು ಆಹಾರ ಭದ್ರತೆ ಸೇರಿದಂತೆ ಹಲವಾರು ಪ್ರಮುಖ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿರುವ ವಿಶ್ವ ನಾಯಕರ ಪಟ್ಟಿ ಇಲ್ಲಿದೆ. ಅಮೆರಿಕ … Continued

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಪರೀಕ್ಷೆ ವಿಧಾನದಲ್ಲಿ ಬದಲಾವಣೆ, ವರ್ಷಕ್ಕೆ 3 ಸಲ ಪರೀಕ್ಷೆ…

ಬೆಂಗಳೂರು : ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯು (Second PUC) ಪರೀಕ್ಷೆ ವ್ಯವಸ್ಥೆಯಲ್ಲಿ ಹೊಸ ವಿಧಾನ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ಮುಂದೆ ಒಂದು ವರ್ಷದಲ್ಲಿ ಮೂರು ವಾರ್ಷಿಕ ಪರೀಕ್ಷೆ ನಡೆಸಲು ಇಲಾಖೆ ನಿರ್ಧರಿಸಲಾಗಿದೆ. .ಅನುತ್ತೀರ್ಣರಾದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಬಹುದು. ಅಂದರೆ, ಅವರಿಗೆ ವರ್ಷಕ್ಕೆ … Continued

ಕ್ರಿಕೆಟ್‌ ವಿಶ್ವಕಪ್‌ 2023 : 15 ಸದಸ್ಯರ ಭಾರತದ ತಂಡ ಪ್ರಕಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2023ರ ವಿಶ್ವಕಪ್‌ ಕ್ರಿಕೆಟ್‌ಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹದಿಮೂರನೇ ಆವೃತ್ತಿಯ ವಿಶ್ವಕಪ್ ಭಾರತದಲ್ಲಿ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ. ಈ ಹಿಂದೆ ಮೂರು ಬಾರಿ ವಿಶ್ವಕಪ್ ಆತಿಥ್ಯ ವಹಿಸಿದ್ದ … Continued

ʼಇಂಡಿಯಾʼವನ್ನು ʼಭಾರತʼ ಎಂದು ಮರುನಾಮಕರಣ ಮಾಡಲಿದೆಯೇ ಕೇಂದ್ರ ಸರ್ಕಾರ? ಭಾರೀ ಚರ್ಚೆಗೆ ಕಾರಣವಾದ ರಾಷ್ಟ್ರಪತಿ ಭವನದ ಆಹ್ವಾನ ಪತ್ರಿಕೆ

ನವದೆಹಲಿ : ಸೆಪ್ಟೆಂಬರ್ 18ರಿಂದ 22ರ ವರೆಗೆ ನಿಗದಿಯಾಗಿರುವ ಸಂಸತ್ತಿನ ಮುಂಬರುವ ವಿಶೇಷ ಅಧಿವೇಶನದಲ್ಲಿ ʼಇಂಡಿಯಾʼವನ್ನು ಭಾರತ ಎಂದು ಮರುನಾಮಕರಣ ಮಾಡುವ ನಿರ್ಣಯವನ್ನು ಸರ್ಕಾರವು ತರಬಹುದು. ಭಾರತದ ಸಂವಿಧಾನವು ಪ್ರಸ್ತುತ ದೇಶವನ್ನು “ಇಂಡಿಯಾ, ಅದು ಭಾರತ…(“India, that is Bharat) ” ಎಂದು ಉಲ್ಲೇಖಿಸುತ್ತದೆ, ಆದರೆ ಇದನ್ನು ಸರಳವಾಗಿ “ಭಾರತ” ಎಂದು ತಿದ್ದುಪಡಿ ಮಾಡುವ ಒತ್ತಾಯವೂ … Continued

9 ವರ್ಷದಲ್ಲಿ ಒಂದೂ ರಜೆ ತೆಗೆದುಕೊಳ್ಳದೆ ಕೆಲಸ ಮಾಡಿದ ಪ್ರಧಾನಿ ಮೋದಿ…!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಕೆಲಸ ಮಾಡಿದ್ದು, ಒಂದು ದಿನವೂ ಕೆಲಸದಿಂದ ರಜೆ ತೆಗೆದುಕೊಂಡಿಲ್ಲ ಎಂದು ಆರ್‌ಟಿಐ ಪ್ರಶ್ನೆಗೆ ಪಿಎಂಒ ಉತ್ತರಿಸಿದೆ. 2014ರ ಮೇ ತಿಂಗಳಲ್ಲಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು 3,000ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ … Continued

2021-22ರ ಆರ್ಥಿಕ ವರ್ಷದಲ್ಲಿ ಬಿಜೆಪಿ ದೇಶದಲ್ಲೇ ಅತ್ಯಂತ ಶ್ರೀಮಂತ ಪಕ್ಷ, ನಂತರದ ಸ್ಥಾನದಲ್ಲಿ ಕಾಂಗ್ರೆಸ್, ನಂತರ ಯಾರು..? 8 ರಾಷ್ಟ್ರೀಯ ಪಕ್ಷಗಳ ಆಸ್ತಿ ವಿವರಗಳು…

ನವದೆಹಲಿ: 2021-22ರ ಆರ್ಥಿಕ ವರ್ಷದಲ್ಲಿ ಎಂಟು ರಾಷ್ಟ್ರೀಯ ಪಕ್ಷಗಳು ಘೋಷಿಸಿದ ಒಟ್ಟು ಆಸ್ತಿ 8,829.158 ಕೋಟಿ ರೂ.ಗಳಿಗೆ ಏರಿಕೆಯಾಗಿದೆ, ಈ ಪೈಕಿ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ ಎಂದು ವರದಿಯೊಂದು ಹೇಳಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತನ್ನ ವರದಿಯಲ್ಲಿ, ಆರ್ಥಿಕ ವರ್ಷ 2020-21ರ ಅವಧಿಯಲ್ಲಿ ಎಂಟು … Continued