ಆದಿತ್ಯ L1 ಬಾಹ್ಯಾಕಾಶ ನೌಕೆಯನ್ನು 40,000 ಕಿಮೀ ದೂರದ ಭೂಮಿಯ ಕಕ್ಷೆಯಲ್ಲಿ ಇರಿಸಿದ ಇಸ್ರೋ

ನವದೆಹಲಿ: ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಸೂರ್ಯ ವೀಕ್ಷಣಾಲಯವಾದ ಆದಿತ್ಯ ಎಲ್ 1 ತನ್ನ ಎರಡನೇ ಕಕ್ಷೆಯ ಕೌಶಲ್ಯವನ್ನು ಪೂರ್ಣಗೊಳಿಸಿದೆ, ಈಗ ಅದು ಭೂಮಿಯ ಸುತ್ತ ತನ್ನ ಹತ್ತಿರದ ಬಿಂದುವಿನಲ್ಲಿ 282 ಕಿಮೀ ಮತ್ತು ಅತ್ಯಂತ ದೂರದಲ್ಲಿ 40,225 ಕಿಮೀ ಅಳತೆಯ ದೀರ್ಘವೃತ್ತದ ಕಕ್ಷೆಯಲ್ಲಿ ಸುತ್ತುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಂಗಳವಾರ ತಿಳಿಸಿದೆ. … Continued

ಭಾರತದ ಭೇಟಿಗೆ ಮುನ್ನ ಅಮೆರಿಕ ಅಧ್ಯಕ್ಷ ಬೈಡನ್‌ ಪತ್ನಿಗೆ ಕೋವಿಡ್‌ ಸೋಂಕು

ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್‌ ಸೋಮವಾರ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದಾರೆ. ಆದರೆ ಸೌಮ್ಯ ರೋಗಲಕ್ಷಣಗಳಿವೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ. ಪತ್ನಿಗೆ ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ಕಂಡುಬಂದ ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೂ ಕೋವಿಡ್‌-19 ಪರೀಕ್ಷೆ ನಡೆಸಲಾಯಿತು. ಆದರೆ ಅವರಿಗೆ ಕೋವಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿದೆ. ಅಧ್ಯಕ್ಷರು ನಿಯಮಿತವಾಗಿ ಪರೀಕ್ಷೆಯನ್ನು ಮುಂದುವರೆಸುತ್ತಾರೆ … Continued

ಲೋಕಸಭಾ ಸದಸ್ಯತ್ವ ಅನರ್ಹತೆ ಪ್ರಕರಣ : ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ತಮ್ಮ ಆಯ್ಕೆ ಅನೂರ್ಜಿತಗೊಳಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಪ್ರಜ್ವಲ ರೇವಣ್ಣ ಮತ್ತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ … Continued

35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಬರೋಬ್ಬರಿ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಎರಡು ದಿನಗಳ ಹಿಂದಷ್ಟೇ ಹತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು. ಈಗ ಮತ್ತೆ ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳು … Continued