ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಸೆಪ್ಟಂಬರ್‌ 6ರಿಂದ 8ರ ವರೆಗೆ ಮೂರು ದಿನ ಯಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಸೆಪ್ಟಂಬರ್‌ 6ರಂದು ಯಾದಗರಿ ಹಾಗೂ ಬೀದರ ಜಿಲ್ಲೆಗಳಿಗೆ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಿಗೆ 6 ಹಾಗೂ 7ರಂದು, ರಾಯಚೂರು ಜಿಲ್ಲೆಗೆ 7ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗಿನಲ್ಲಿ ಸೆಪ್ಟೆಂಬರ್‌ 7 ಹಾಗೂ 8ರಂದು, ಚಾಮರಾಜ ನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಸೆಪ್ಟಂಬರ್‌ 8ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ, ಗದಗ, ಚಿತ್ರದುರ್ಗ, ಬಳ್ಳಾರಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement