ಕಾವೇರಿ ನೀರು ವಿವಾದ: ಸೆಪ್ಟೆಂಬರ್‌ 21ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಸೆಪ್ಟಂಬರ್ 21ಕ್ಕೆ ಮುಂದೂಡಿದೆ.
ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ. ಅಲ್ಲದೇ ಹೆಚ್ಚು ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶಿಸಬೇಕು ಎಂದು ಕೋರಿ ತಮಿಳುನಾಡು ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಬಿ.ಆರ್‌. ಗವಾಯಿಯವರು ತಮಿಳುನಾಡು ಪರ ವಕೀಲ ಮಾತು ಆಲಿಸಿದರು. ವಿಚಾರಣೆ ವೇಳೆ, ಬುಧವಾರ ಒಬ್ಬರು ನ್ಯಾಯಾಧೀಶರು ರಜೆಯಲ್ಲಿದ್ದಾರೆ. ಮುಂದಿನ ವಾರ ತಾವು (ಬಿ.ಆರ್‌. ಗವಾಯಿ) ಲಭ್ಯವಿರುವುದಿಲ್ಲ ಎಂದು ತಿಳಿಸಿದ ನ್ಯಾಯಮೂರ್ತಿಗಳು, ಹೊಸ ಪೀಠದಲ್ಲಿ ವಿಚಾರಣೆ ಮುಂದುವರಿಸಲು ಮುಖ್ಯ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಲು ವಕೀಲರಿಗೆ ಅವರು ತಿಳಿಸಿದೆ.
ಇದಕ್ಕೆ ತಮಿಳುನಾಡು ಪರ ವಕೀಲರು, ದಯಮಾಡಿ ತಮ್ಮದೇ ನ್ಯಾಯಪೀಠದಲ್ಲಿ ವಿಚಾರಣೆ ಮುಂದುವರಿಸುವಂತೆ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದರು. ಇದಕ್ಕೆ ಒಪ್ಪಿದ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಅವರು ಸೆಪ್ಟಂಬರ್ 21ಕ್ಕೂ ವಿಚಾರಣೆ ಮುಂದೂಡಿದರು. ಅಲ್ಲದೇ ಅಂದೆ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಅರ್ಜಿಯನ್ನೂ ಸಹ ವಿಚಾರಣೆ ಮಾಡುವುದಾಗಿ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement