ಪಂಜಾಬಿನಲ್ಲಿ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟದಲ್ಲಿ ಬಿರುಕು? : ಕಾಂಗ್ರೆಸ್‌ ಜೊತೆ ಮೈತ್ರಿಯಿಲ್ಲ-ಎಲ್ಲ ಕ್ಷೇತ್ರಗಳಲ್ಲೂ ಏಕಾಂಗಿ ಸ್ಪರ್ಧೆ ಎಂದು ಪ್ರಕಟಿಸಿದ ಆಪ್‌ ಸಚಿವರು..!

ಚಂಡೀಗಢ : ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಂಜಾಬ್ ಸಚಿವರಾದ ಅನ್ಮೋಲ್ ಗಗನ್ ಮಾನ್ ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ರಾಜ್ಯದ ಜನತೆ ಪ್ರೀತಿಸುತ್ತಾರೆ. ಜನರು ಪ್ರಾಮಾಣಿಕ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಮತ್ತು ಕಾಂಗ್ರೆಸ್ ಜೊತೆ ಯಾವುದೇ ರೀತಿಯ ಮೈತ್ರಿಯನ್ನು ಸಹಿಸುವುದಿಲ್ಲ ಎಂದು ಪಂಜಾಬ್ ಸಚಿವೆ ಹೇಳಿದ್ದಾರೆ.
ಪಂಜಾಬ್‌ನಲ್ಲಿ ಭಗವಂತ್ ಮಾನ್ ನೇತೃತ್ವದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಮತ್ತು ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ.
ಆಮ್ ಆದ್ಮಿ ಪಕ್ಷದ (ಎಎಪಿ) ಚಿಹ್ನೆಯ ಮೇಲೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
“ರಾಷ್ಟ್ರೀಯ ಮಟ್ಟದಲ್ಲಿ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ, ಆದರೆ ಆಮ್ ಆದ್ಮಿ ಪಕ್ಷವು ಪಂಜಾಬ್‌ನ ಎಲ್ಲಾ 13 ಸ್ಥಾನಗಳಲ್ಲಿ ತನ್ನದೇ ಚಿಹ್ನೆಯ ಮೇಲೆ ಸ್ಪರ್ಧಿಸಲಿದೆ. ನಾವು ಕಾಂಗ್ರೆಸ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವೆ ಅನ್ಮೋಲ್ ಗಗನ್ ಮಾನ್ ಹೇಳಿದ್ದಾರೆ. ಭಗವಂತ್ ಮಾನ್ ನೇತೃತ್ವದ ಎಎಪಿ ರಾಜ್ಯ ಘಟಕವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

ಪಂಜಾಬ್‌ನಲ್ಲಿ ಮೈತ್ರಿಗೆ ಕಾಂಗ್ರೆಸ್‌ ಸಹ ವಿರೋಧ
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಆಡಳಿತಾರೂಢ ಎಎಪಿ ಜೊತೆ ಯಾವುದೇ ರೀತಿಯ ಮೈತ್ರಿಗೆ ವಿರೋಧವಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಮಂಗಳವಾರ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲು ಪಕ್ಷ ತಯಾರಿ ನಡೆಸುತ್ತಿದೆ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕ ಪರತಾಪ್ ಸಿಂಗ್ ಬಾಜ್ವಾ ಅವರು ರಾಜ್ಯದ ರಾಜಕೀಯ ಪರಿಸ್ಥಿತಿ ಮತ್ತು ಆಮ್ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿಷಯದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಶಾಸಕರು ಮತ್ತು ಇತರ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದರು. ಸಭೆಯಲ್ಲಿ, ನಾಯಕರು 2024 ರ ಲೋಕಸಭೆ ಚುನಾವಣೆಗೆ ಎಎಪಿ ಜೊತೆ ಮೈತ್ರಿಗೆ ವಿರೋಧಿಸಿದರು.

ಏತನ್ಮಧ್ಯೆ, ಪಂಜಾಬ್‌ನ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು, ಪಕ್ಷದ ಹೈಕಮಾಂಡ್‌ನ ನಿರ್ಧಾರವು ಸರ್ವೋಚ್ಚವಾಗಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 1 ರಂದು, ಇಂಡಿಯಾ ಮೈತ್ರಿಕೂಟ ತನ್ನ ಮುಂಬೈ ಸಭೆಯಲ್ಲಿ, 2024 ರ ಲೋಕಸಭೆ ಚುನಾವಣೆಯಲ್ಲಿ “ಸಾಧ್ಯವಾದಷ್ಟು” ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿತು, ರಾಜ್ಯಗಳಲ್ಲಿ ಸೀಟು ಹಂಚಿಕೆಯ ವ್ಯವಸ್ಥೆಗಳನ್ನು “ಕೊಡು-ಕೊಳ್ಳುವ ಸಹಕಾರಿ ಮನೋಭಾವದಲ್ಲಿ ಮಾಡಲಾಗುವುದು” ಎಂದು ಪ್ರತಿಪಾದಿಸಿತು.
ಮಾರ್ಚ್ 2022 ರಲ್ಲಿ ಪಂಜಾಬ್‌ನಲ್ಲಿ ಎಎಪಿ (AAP) ಅಧಿಕಾರಕ್ಕೆ ಬಂದಿತು, ವಿಧಾನಸಭೆಯಲ್ಲಿ ಎಎಪಿ 92 ಸ್ಥಾನಗಳನ್ನು ಹೊಂದಿದೆ.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement