ಬರ ಪಟ್ಟಿಗೆ ರಾಜ್ಯದ 62 ತಾಲೂಕುಗಳು ಸೇರ್ಪಡೆ : ಸಚಿವ ಕೃಷ್ಣ ಭೈರೇಗೌಡ

ಚಿತ್ರದುರ್ಗ : ರಾಜ್ಯದಲ್ಲಿ ಮೊದಲ ಹಂತದ ಬೆಳೆ ಸಮೀಕ್ಷೆ ಮಾಡಲಾಗಿದ್ದು, ಮಳೆಯ ಅಭಾವದ ಹಿನ್ನೆಲೆಯಲ್ಲಿ ರಾಜ್ಯದ 62 ತಾಲೂಕುಗಳನ್ನು ಬರದ ಪಟ್ಟಿಗೆ ಸೇರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್‌ 18ರ ತನಕ ಮಳೆ ಕೊರತೆಯಾಗಿರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರದ ಪಟ್ಟಿಗೆ ತಾಲೂಕುಗಳನ್ನು ಆಯ್ಕೆಯಾಗಿದೆ. ಇನ್ನೊಂದು ಸುತ್ತಿನ ಬೆಳೆ ಸಮೀಕ್ಷೆ ಮಾಡಬೇಕಿದ್ದು, ಮಳೆ ಕೊರತೆಯಾದ ಉಳಿದ 51 ತಾಲೂಕುಗಳ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 2ಕ್ಕೆ 83 ತಾಲ್ಲೂಕು ಬರ ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಮೀಕ್ಷೆ ವರದಿ ಬರುತ್ತದೆ. ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೂಡಾ ನಾವು ನೀಡುತ್ತೇವೆ ಎಂದು ತಿಳಿಸಿದರು.
ಜನರ ನಿರೀಕ್ಷೆಯಂತೆ ಬರ ಘೋಷಣೆ ಮಾಡಲು ಆಗುವುದಿಲ್ಲ. ಮಾರ್ಗಸೂಚಿಯಂತೆ ಮಾಡಬೇಕಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಬದಲಾವಣೆ ಮಾಡುವಂತೆ ಮನವಿ ಮಾಡುತ್ತೇವೆ. ಸರ್ಕಾರ ಬಂದ ಬಳಿಕ ಪತ್ರ ಬರೆಯಲಾಗಿದೆ. ಇನ್ನೊಂದು ಬಾರಿ ಮಾನದಂಡ ಬದಲಾವಣೆ ಮಾಡಿ ಎಂದು ಮನವಿ ಮಾಡುತ್ತೇವೆ. ಎಂದು ಹೇಳಿದರು.

ಪ್ರಮುಖ ಸುದ್ದಿ :-   ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement