ತರೀಕೆರೆ : ಶಾಲಾ ಮಕ್ಕಳತ್ತ ನುಗ್ಗಿದ ಖಾಸಗಿ ಬಸ್​.. ಓರ್ವ ವಿದ್ಯಾರ್ಥಿನಿ ಸಾವು, ಕೆಲವರಿಗೆ ಗಾಯ

ಚಿಕ್ಕಮಗಳೂರು: ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ನುಗ್ಗಿದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ ಬಳಿ ನಡೆದಿದೆ ಎಂದು ವರದಿಯಾಗಿದೆ.
ಕಾವಲ್ ದುಗ್ಲಾಪುರ ಗೇಟ್‌ ಮಾರ್ಗವಾಗಿ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಘಟನೆಯಲ್ಲಿ ತುಳಸಿ (15) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಮತ್ತೋರ್ವ ವಿದ್ಯಾರ್ಥಿನಿ ನಿವೇದಿತಾ (14) ಎಂಬವಳ ಸ್ಥಿತಿ ಗಂಭೀರವಾಗಿದ್ದು, ಅವಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ಹೇಳಲಾಗಿದೆ. ಇನ್ನೂ ಕೆಲವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.
ಕಾವಲ್‌ ಗೇಟ್‌ ಬಳಿ ವಿದ್ಯಾರ್ಥಿಗಳು ಬಸ್ಸಿಗಾಗಿ ಕಾಯುತ್ತಿದ್ದರು. ವೇಗವಾಗಿ ಬಂದ ಬಸ್‌ ವಿದ್ಯಾರ್ಥಿಗಳ ಮೇಲೆ ಹರಿದು ಕೊನೆಗೆ ಮನೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದೆ. ರವಾನಿಸಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ಬಸ್‌ ನುಗ್ಗಿದೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement