ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಹೊಸದಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ, ಬೆಳ್ತಂಗಡಿಯ ಜಿ ನವೀನಕುಮಾರ ಮತ್ತು … Continued

ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ … Continued

3 ಬಾರಿ ತಲಾಖ್ ಹೇಳಿ ಪತ್ನಿ, ಮಗುವನ್ನು ಕತಾರ್‌ ಹೊಟೇಲ್‌ನಲ್ಲಿಯೇ ಬಿಟ್ಟು ಭಾರತಕ್ಕೆ ಬಂದ ಗಂಡ…!

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ ಮೂಲದ ವ್ಯಕ್ತಿಯೊಬ್ಬ ಪತ್ನಿಗೆ 3 ಬಾರಿ ತಲಾಖ್ ಹೇಳಿ, ಆಕೆ ಹಾಗೂ ಆಕೆಯ ಮಗುವನ್ನೂ ಕತಾರಿನ ಹೊಟೇಲೊಂದರಲ್ಲಿ ಬಿಟ್ಟು ಬಂದಿದ್ದಾನೆ. ಇದನ್ನು ಪ್ರಶ್ನಿಸಿ ಪತ್ನಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಮಧ್ಯಪ್ರದೇಶದ ಭೋಪಾಲ್ ಮೂಲದ ವ್ಯಕ್ತಿಯೊಬ್ಬ ತ್ರಿವಳಿ ತಲಾಖ್ ಘೋಷಿಸಿದ ನಂತರ ಕತಾರ್‌ನ ಹೋಟೆಲ್‌ನಲ್ಲಿ ಪತ್ನಿ ಮತ್ತು ಮಗುವನ್ನು ಬಿಟ್ಟಿಬಂದಿದ್ದಾನೆ, ಆತನ ವಿರುದ್ಧ … Continued

ಏಳು ಕ್ಷೇತ್ರಗಳ ಉಪಚುನಾವಣೆ ; ಬಿಜೆಪಿ 3, ಇಂಡಿಯಾ ಮೈತ್ರಿಕೂಟಕ್ಕೆ 4 ಕಡೆ ಗೆಲುವು

ನವದೆಹಲಿ: ವಿವಿಧ ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 7ರಲ್ಲಿ ಬಿಜೆಪಿ 3 ಹಾಗೂ ಇಂಡಿಯಾ ಮೈತ್ರಿಕೂಟವು 4 ಕ್ಷೇತ್ರಗಳಲ್ಲಿ ಜಯ ದಾಖಲಿಸಿದೆ. ಹಾಗೂ ಬಿಜೆಪಿ ಮೂರರಲ್ಲಿ ಗೆಲುವು ಸಾಧಿಸಿದೆ. ತ್ರಿಪುರದ ಧನ್‌ಪುರ್ ಮತ್ತು ಬೊಕ್ಸಾನಗರ ವಿಧಾನಸಭಾ ಕ್ಷೇತ್ರ ಹಾಗೂ ಉತ್ತರಾಖಂಡದ ಬಾಗೇಸ್‌ವರ್‌ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಳೆದ ಬಾರಿಗೆ … Continued

ಬಿಜೆಪಿ ಕೋಮುವಾದಿ ಪಕ್ಷ, ಜೆಡಿಎಸ್ ಮೈತ್ರಿಗೆ ಮುಂದಾಗಿರುವುದು ಅಚ್ಚರಿ ತಂದಿದೆ: ಬಿಜೆಪಿ ಸಂಸದ‌ ಬಚ್ಚೇಗೌಡ ವಾಗ್ದಾಳಿ

ಚಿಕ್ಕಬಳ್ಳಾಪುರ: ಜಾತ್ಯತೀತ ಪಕ್ಷ ಎಂದು ಹೆಸರಿಟ್ಟುಕೊಂಡು ಕೋಮುವಾದಿ ಪಕ್ಷದ ಜೊತೆ ಸ್ನೇಹ ಬೆಳೆಸಲು ಜೆಡಿಎಸ್‌ ಹೊರಟಿದೆ. ಇದು ತಮಗೆ ಅಚ್ಚರಿ ತಂದಿದೆ ಎಂದು ಬಚ್ಚೇಗೌಡ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿ.ಪಂ ಸಭಾಂಗಣದಲ್ಲಿ ಶುಕ್ರವಾರ ದಿಶಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ‌ ಜೆಡಿಎಸ್‌ ಮುಂದಿನ‌ ಲೋಕಸಭಾ ‌ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಹೊರಟಿರುವುದು ನನಗೆ ಅಚ್ಚರಿ … Continued

ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ ನಿಧನ

ಮೈಸೂರು: ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. “ಅವರು ಇಂದು, ಶುಕ್ರವಾರ ಬೆಳಿಗ್ಗೆ ತಮ್ಮ ಅಪಾರ್ಟ್ಮೆಂಟಿನಲ್ಲಿ ನಿಧನರಾದರು. ದೆಹಲಿಯಲ್ಲಿದ್ದ ಅವರು, ಎರಡು ವರ್ಷಗಳ ಹಿಂದೆ ಮೈಸೂರಿನ ಕೆಆರ್ ಎಸ್ ರಸ್ತೆಯ ಅಪಾರ್ಟ್ ಮೆಂಟ್ ವೊಂದರ ಫ್ಲಾಟ್ ನಲ್ಲಿ ವಾಸಿಸುತ್ತಿದ್ದರು. ಅಜಿತ್ ನಿನನ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಹೈದರಾಬಾದಿನಲ್ಲಿ … Continued

ಮೀಸಲಾತಿ ವಿವಾದದ ನಡುವೆ ಮಹಾರಾಷ್ಟ್ರದ ಕಂದಾಯ ಸಚಿವರ ತಲೆ ಮೇಲೆ ಅರಿಶಿಣದ ಪುಡಿ ಸುರಿದ ವ್ಯಕ್ತಿ | ವೀಡಿಯೊ

ಮುಂಬೈ: ಮೀಸಲಾತಿಗಾಗಿ ಒತ್ತಾಯಿಸಿ ಧಂಗರ್ ಸಮುದಾಯದ ಸದಸ್ಯರು ನೀಡಿದ ಮನವಿ ಪತ್ರ ಓದುತ್ತಿದ್ದಾಗ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರಿಗೆ ಹಲ್ದಿ ಅಥವಾ ಅರಿಶಿನ ಪುಡಿಯನ್ನು ಎರಚಲಾಗಿದೆ. ಘಟನೆಯ ವೀಡಿಯೋದಲ್ಲಿ ಧನಗರ್ (ಕುರುಬ) ಸಮುದಾಯದ ಇಬ್ಬರು ವ್ಯಕ್ತಿಗಳು ಸಚಿವರ ಎರಡೂ ಬದಿಯಲ್ಲಿ ನಿಂತಿರುವುದು ಕಂಡುಬರುತ್ತದೆ. ಸಚಿವರು ಅವರು ನೀಡಿದ ಪತ್ರವನ್ನು ಓದುತ್ತಿದ್ದಾಗ, ಅವರಲ್ಲಿ … Continued

ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ವರಿಷ್ಠರ ಒಪ್ಪಿಗೆ : ಬಿಎಸ್‌ ಯಡಿಯೂರಪ್ಪ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಮೈತ್ರಿ ಬಗ್ಗೆ ಉಭಯ ಪಕ್ಷಗಳ … Continued

ಟಿವಿ ಶೋಗೆ ಡಬ್ಬಿಂಗ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಮೃತಪಟ್ಟ ನಟ-ನಿರ್ದೇಶಕ ಜಿ ಮಾರಿಮುತ್ತು

ಚೆನ್ನೈ: ಜನಪ್ರಿಯ ತಮಿಳು ನಟ ಮತ್ತು ನಿರ್ದೇಶಕ ಜಿ ಮಾರಿಮುತ್ತು ಅವರು ಇಂದು ಗುರುವಾರ (ಸೆಪ್ಟೆಂಬರ್ 8) ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾದರು. ಶುಕ್ರವಾರ ಬೆಳಿಗ್ಗೆ 8:30 ರ ಸುಮಾರಿಗೆ ಅವರು ‘ಎಥಿರ್ ನೀಚಲ್’ ಎಂಬ ತಮ್ಮ ದೂರದರ್ಶನ ಕಾರ್ಯಕ್ರಮಕ್ಕೆ ಡಬ್ಬಿಂಗ್ ಮಾಡುವಾಗ ಅವರು ಕುಸಿದುಬಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ … Continued

ಅಮಿತ್ ಶಾ ಜೊತೆ ದೇವೇಗೌಡ ಗೌಪ್ಯ ಭೇಟಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ?

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಯಾರಿಗೆ ಬೆಂಬಲ ನೀಡಲಿದೆ ಎಂಬ ಕುತೂಹಲದ ನಡುವೆ ಪಕ್ಷದ ವರಿಷ್ಠ ದೇವೇಗೌಡರು ಕೇಂದ್ರ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಅಮಿತ್ ಶಾ ಭೇಟಿ ವೇಳೆ ಅನೌಪಚಾರಿಕವಾಗಿ ಮೈತ್ರಿ ಮಾತುಕತೆ ನಡೆಸಿರುವ ದೇವೇಗೌಡರು ನಾಲ್ಕೈದು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ … Continued