ಮೈಸೂರು: ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
“ಅವರು ಇಂದು, ಶುಕ್ರವಾರ ಬೆಳಿಗ್ಗೆ ತಮ್ಮ ಅಪಾರ್ಟ್ಮೆಂಟಿನಲ್ಲಿ ನಿಧನರಾದರು. ದೆಹಲಿಯಲ್ಲಿದ್ದ ಅವರು, ಎರಡು ವರ್ಷಗಳ ಹಿಂದೆ ಮೈಸೂರಿನ ಕೆಆರ್ ಎಸ್ ರಸ್ತೆಯ ಅಪಾರ್ಟ್ ಮೆಂಟ್ ವೊಂದರ ಫ್ಲಾಟ್ ನಲ್ಲಿ ವಾಸಿಸುತ್ತಿದ್ದರು. ಅಜಿತ್ ನಿನನ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದ ನಂತರ ವ್ಯಂಗ್ಯಚಿತ್ರಕಾರರಾದರು. ಇಂಡಿಯಾ ಟುಡೆ, ಔಟ್ ಲುಕ್, ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಗಳಿಗೆ ವ್ಯಂಗ್ಯಚಿತ್ರಕಾರರಾಗಿ ಕೆಲಸ ಮಾಡಿದ್ದಾರೆ.
ಇಂಡಿಯಾ ಟುಡೆ ಪತ್ರಿಕೆ ಬಳಗದ ‘ಟಾರ್ಗೆಟ್’ ಎಂಬ ಮಕ್ಕಳ ಪತ್ರಿಕೆಗೆ ‘ಡಿಟೆಕ್ಟಿವ್ ಮೂಚುವಾಲಾ’ ಎಂಬ ಸರಣಿ ವ್ಯಂಗ್ಯಚಿತ್ರಗಳನ್ನು ಪ್ರಕಟಿಸಿದ್ದರು. ಬಳಿಕ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ನಿತ್ಯ ವ್ಯಂಗ್ಯಚಿತ್ರ ಬರೆಯುತ್ತಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ