ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿಗೆ ವರಿಷ್ಠರ ಒಪ್ಪಿಗೆ : ಬಿಎಸ್‌ ಯಡಿಯೂರಪ್ಪ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಮೈತ್ರಿ ಬಗ್ಗೆ ಉಭಯ ಪಕ್ಷಗಳ ವರಿಷ್ಠರ ಜೊತೆ ಮಾತುಕತೆ ನಡೆದಿದೆ. ನಮ್ಮ ವರಿಷ್ಠರ ಜೊತೆ ಜೆಡಿಎಸ್ ವರಿಷ್ಠರು ಮಾತನಾಡಿದ್ದಾರೆ. ಜೆಡಿಎಸ್​ ಜೊತೆ​​ ಮೈತ್ರಿ ಆಗಲಿದೆ. ಜೆಡಿಎಸ್ ಗೆ ನಾಲ್ಕು ಸೀಟ್ ಕೊಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಯಾವ ಕ್ಷೇತ್ರಗಳನ್ನ ಬಿಟ್ಟುಕೊಡಬೇಕು ಎನ್ನುವ ಬಗ್ಗೆ ಅಮಿತ್ ಶಾ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ. ಮೈತ್ರಿಯಿಂದ ಶಕ್ತಿ ಬಂದಿದೆ. ಇದರಿಂದ 25ಕ್ಕೂ ಹೆಚ್ಚು ಸೀಟ್ ಗೆಲ್ಲಲು ನಮಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಇತ್ತೀಚೆಗೆ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮೈತ್ರಿ ರಚನೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿ ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಐದು ಕ್ಷೇತ್ರ ಹಾಗೂ ಅದರ ಹೊರತಾಗಿ ಒಂದು ಕ್ಷೇತ್ರಕ್ಕೆ ದೇವೇಗೌಡರು ಬೇಡಿಕೆ ಇಟ್ಟಿದ್ದಾರೆ,  ಆದರೆ, ಬಿಜೆಪಿ ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್‌ ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳನ್ನು ಕೇಳಿದೆ. ಆದರೆ ಬಿಜೆಪಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಹಾಸನ ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಒಪ್ಪಿಕೊಂಡಿದೆ ಹಾಗೂ ಸ್ಥಾನ ಹೊಂದಾಣಿಕೆಯ ಅಂತಿಮ ನಿರ್ಧಾರವನ್ನು ಪ್ರಧಾನಿ ಮೋದಿ ಅವರು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

ಮಂಡ್ಯದ ಬಗ್ಗೆ ಬಿಜೆಪಿ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಯಾಕೆಂದರೆ ಸುಮಲತಾ ಅಂಬರೀಶ ಅಲ್ಲಿ ಲೋಕಸಭಾ ಸದಸ್ಯರಾಗಿದ್ದಾರೆ. ಹಾಗೂ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಬೆಂಬಲಿಸತ್ತು. ಮತ್ತು ಅವರು ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಬಿಜೆಪಿಗೆ ಅಲ್ಲಿ ಟಿಕೆಟ್‌ ಕೊಡುವ ಅಥವಾ ಅವರಿಗೇ ಬೆಂಬಲಿಸುವ ಭರವಸೆ ನೀಡಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಬಿಟ್ಟುಕೊಟ್ಟರೆ ಸುಮಲತಾ ಅಂಬರೀಶ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರವನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ಸದ್ಯಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಬಿಜೆಪಿಯು ಜೆಡಿಎಸ್‌ಗೆ ಬಿಟ್ಟುಕೊಡುವುದರ ಬಗ್ಗೆ ಮಾತನಾಡಿಲ್ಲ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement