ಮುಂಗಾರು ಚುರುಕು; ರಾಜ್ಯದ 8 ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯಪುರದಲ್ಲಿ ಸಾಧಾರಣ ಮಲೆಯಾಗಲಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

5 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement