ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಖಾಸಗಿ ಬಸ್‌ಗಳಿಗೂ ವಿಸ್ತರಣೆ ಮಾಡಬೇಕು, ರಸ್ತೆ ತೆರಿಗೆ ಸಂಪೂರ್ಣ ರದ್ದು ಸೇರಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾಳೆ, ಸೋಮವಾರ (ಸೆಪ್ಟೆಂಬರ್ 11) ಬೆಂಗಳೂರಿನಲ್ಲಿ ಸಾರಿಗೆ ಬಂದ್‌ಗೆ ಕರೆ ನೀಡಲಾಗಿದೆ.
ಈ ಸಂಬಂಧ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಗುರುವಾರ ನಡೆಸಿದ ಸಭೆ ವಿಫಲವಾಗಿದೆ. ಭಾನುವಾರ ರಾತ್ರಿ 12 ಗಂಟೆಯಿಂದ ಖಾಸಗಿ ವಾಹನ ಸಂಚಾರ ಬಂದ್ ಆಗಲಿದ್ದು, ಸೋಮವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.
ಬಂದ್‌ನಿಂದಾಗಿ 32 ಸಂಘಟನೆಗಳ 7 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ನಿಲ್ಲಿಸಲಿವೆ. ಏರ್ಪೋಟ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಓಲಾ, ಊಬರ್, ಆಟೋ ಟ್ಯಾಕ್ಸಿ ಬಂದ್ ಆಗಲಿದೆ. ಕಾರ್ಪೊರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‌ಗಳು ಕೂಡ ಬಂದ್‌ಗೆ ಬೆಂಬಲ ನೀಡಿದ್ದು ಸಂಚಾರ ಸ್ಥಗಿತಗೊಳಿಸಲಿವೆ ಎಂದು ಹೇಳಲಾಗಿದೆ.
ಅಲ್ಲದೆ, ಖಾಸಗಿ ವಾಹನಗಳ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸುವವರಿಗೂ ಬಂದ್ ಗೆ ಬೆಂಬಲಿಸಿದ್ದಾರೆ, ಗೂಡ್ಸ್ ವಾಹನಗಳು ಬಂದ್ ಆಗುವ ಸಾಧ್ಯತೆ ಇದೆ. ನಗರದಲ್ಲಿ 3 ಲಕ್ಷ ಆಟೋ, 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ ಮತ್ತು ಕಾರ್ಪೊರೇಟ್ ಕಂಪನಿಯ ಬಸ್‌ಗಳು ಓಡಾಟ ನಿಲ್ಲಿಸಲಿವೆ.
ಖಾಸಗಿ ವಾಹನ ಚಾಲಕರ ಒಕ್ಕೂಟ ಸೆ.11 ರಂದು ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರಿಗೆ ತೊಂದರೆಯಾಗಬಾದರು ಬಿಎಂಟಿಸಿ (BMTC) 500 ಹೆಚ್ಚುವರಿ ಬಸ್‌ಗಳನ್ನು ಬಿಡಲು ಸಿದ್ಧತೆ ನಡೆಸಿದ್ದು, ಸೋಮವಾರ ಮುಂಜಾನೆ 5 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಹೆಚ್ಚುವರಿ ಬಸ್‌ಗಳು ನಗರದಲ್ಲಿ (Bengaluru) ಸಂಚರಿಸಲಿವೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ