ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ವಿಜಯವಾಡ : ತೆಲುಗು ದೇಶಂ(ಟಿಡಿಪಿ) ಪಕ್ಷದ ಅಧ್ಯಕ್ಷ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರನ್ನು ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಬಂಧಿಸಿದ್ದು, ವಿಜಯವಾಡದ ಭ್ರಷ್ಟಾಚಾರ ವಿರೋಧಿ ಬ್ಯೂರೋ ನ್ಯಾಯಾಲಯವು ಸೆಪ್ಟೆಂಬರ್‌ 23 ರ ವರೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಅಧಿಕಾರಿಗಳು ಸಿಆರ್‌ಪಿಸಿಯ ಸೆಕ್ಷನ್ 144 ವಿಧಿಸಿದ್ದಾರೆ. ಆಂಧ್ರ ರಾಜ್ಯಾದ್ಯಂತ ಮತ್ತು ಜನರು ಗುಂಪುಗಳಾಗಿ ಓಡಾಡದಂತೆ ಮತ್ತು ಯಾವುದೇ ಮಾರಣಾಂತಿಕ ಆಯುಧಗಳನ್ನು ಹೊಂದಿರದಂತೆ ಸೂಚಿಸಲಾಗಿದೆ.
ಭಾನುವಾರ (ಸೆಪ್ಟೆಂಬರ್‌ 10) ಬೆಳಿಗ್ಗೆ, ಚಂದ್ರಬಾಬು ನಾಯ್ಡು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಶನಿವಾರ ಮುಂಜಾನೆ (ಸೆ.9) ಆಂಧ್ರಪ್ರದೇಶದ ಸಿಐಡಿ 371 ಕೋಟಿ ರೂ. ಕೌಶಲ್ಯ ಅಭಿವೃದ್ಧಿ ಹಗರಣದಲ್ಲಿ ಚಂದ್ರಬಾಬು ನಾಯ್ಡು ಆರೋಪಿ ನಂಬರ್ 1 ಎಂದು ಹೇಳಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಆಸ್ಟ್ರೇಲಿಯಾ ವಿರುದ್ಧ ಗೆಲುವು ; ಪಾಕಿಸ್ತಾನ ಹೊರದಬ್ಬಿ ವಿಶ್ವದ ನಂ.1 ತಂಡವಾದ ಭಾರತ; ಎಲ್ಲ ಸ್ವರೂಪದ ಕ್ರಿಕೆಟ್‌ನಲ್ಲೂ ಅಗ್ರಸ್ಥಾನ ಪಡೆದ ಏಷ್ಯಾದ ಮೊದಲ ತಂಡ ಭಾರತ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement