ಪ್ರಧಾನಿ ಮೋದಿ ಜೊತೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾತುಕತೆ ನಡೆದಿರುವುದು ನಿಜ ಎಂದು ಹೇಳಿದ ದೇವೇಗೌಡ

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಳ್ಳುವುದು ಅಂತಿಮ ಹಂತಕ್ಕೆ ಬಂದಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿರುವುದು ನಿಜ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಭಾನುವಾರ (ಸೆಪ್ಟೆಂಬರ್‌ 10) ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ”ಮೈತ್ರಿ ಬಗ್ಗೆ ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆದಿರುವುದು ನಿಜ. ಆದರೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ನಮಗೆ ಎಷ್ಟು ಸೀಟು ಬೇಕು ಎಂದು ನಾವು ಕೇಳುವುದಿಲ್ಲ. ಸೀಟು ಹಂಚಿಕೆ ಬಗ್ಗೆ ಪ್ರಧಾನಿ ಮೋದಿ ಜೊತೆ ಕುಮಾರಸ್ವಾಮಿ ಮಾತನಾಡುತ್ತಾರೆ. ಅವರು ಸಂಪರ್ಕ ಮಾಡಿದ್ದಾರೆ. ಹೀಗಾಗಿ ಪಕ್ಷ ಉಳಿಸಲು ದೆಹಲಿ ನಾಯಕರ ಜೊತೆಯೇ ಮಾತನಾಡಿದ್ದೇನೆ. ಪ್ರತಿಕ್ಷೇತ್ರದ ಪರಿಸ್ಥಿತಿ ಬಗ್ಗೆ ವಿವರಿಸಿದ್ದೇನೆ ಎಂದು ಹೇಳಿದರು.
ಬಿಜೆಪಿ ನಾಯಕರಾದ ಯಡಿಯೂರಪ್ಙ ಹಾಗೂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಈ ಬಗ್ಗೆ ಜೆಡಿಎಸ್​​ ವರಿಷ್ಠರಿಂದ ಅಧಿಕೃತ ಹೇಳಿಕೆ ಬಂದಿರಲಿಲ್ಲ. ಈಗ ದೇವೇಗೌಡರೇ ಮೈತ್ರಿ ಬಗ್ಗೆ ಬಿಜೆಪಿ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement