ಸಾರಿಗೆ ಸಂಸ್ಥೆಗೆ 13 ಸಾವಿರ ಸಿಬ್ಬಂದಿ ನೇಮಕ, 4 ಸಾವಿರ ಬಸ್‌ಗಳ ಖರೀದಿ : ಸಚಿವ ರಾಮಲಿಂಗಾರೆಡ್ಡಿ

ಮೈಸೂರು: ಕೆಎಸ್‌ಆರ್‌ಟಿಸಿ ಹಾಗೂ ಇತರೆ ನಿಗಮಗಳಿಗೆ 13 ಸಾವಿರ ಸಿಬ್ಬಂದಿ ನೇಮಕ ಮಾಡಲಾಗುವುದು ಹಾಗೂ 4 ಸಾವಿರ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಡಾ. ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಲ್ಲಾ ನಿಗಮಗಳಲ್ಲಿ 11,000 ಸಿಬ್ಬಂದಿ ನಿವೃತ್ತಿ ಹೊಂದಿದ್ದು, ಏಳು ವರ್ಷಗಳಿಂದ ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳ ನೇಮಕಾತಿ ನಡೆದಿಲ್ಲ. ಹೀಗಾಗಿ ಖಾಲಿ ಬಿದ್ದ ಸ್ಥಾನಗಳಿಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ‘ಶಕ್ತಿ’ ಯೋಜನೆ ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲಿ ಒಂದಾಗಿತ್ತು.ಯೋಜನೆ ಯಶಸ್ವಿಯಾಗಿ ಜಾರಿಯಾಗಿದ್ದು ಪ್ರತಿದಿನ ಸುಮಾರು 60 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ವರೆಗೆ ಸುಮಾರು 65 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಯಾವುದೇ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಲಾಗುತ್ತಿದೆ ಎಂದರು.

 

ಇಂದಿನ ಪ್ರಮುಖ ಸುದ್ದಿ :-   ₹2000 ನೋಟು ಬದಲಾವಣೆಗೆ 5 ದಿನ ಮಾತ್ರ ಬಾಕಿ ಇದೆ...

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement