ಚಿತ್ರದುರ್ಗ: ಲಾರಿ-ಬಸ್‌ ಡಿಕ್ಕಿ, ಬಾಲಕ ಸೇರಿ 5 ಮಂದಿ ಸಾವು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45), ರಾಯಚೂರು ರಾಯಚೂರು ಜಿಲ್ಲೆ ಮಸ್ಕಿ ಮೂಲದ ರಮೇಶ(40), ರಾಯಚೂರಿನ ಮಾಬಮ್ಮ(35) ಎಂದು ಗುರುತಿಸಲಾಗಿದೆ. ಇನ್ನಿಬರ ಹೆಸರು ಪತ್ತೆಯಾಗಬೇಕಿದೆ. ಮೃತರಲ್ಲಿ ಒಬ್ಬ ಬಾಲಕನೂ ಸೇರಿದ್ದಾನೆ ಎಂದು ಹೇಳಲಾಗಿದೆ.
ಬಸ್ಸಿನಲ್ಲಿದ್ದ 9 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿರಿಯೂರಿನ ಗೊಲ್ಲಹಳ್ಳಿ ಬಳಿ ಲಾರಿ ಡಿಕ್ಕಿಯಾಗಿದೆ. ಅಪಘಾತದ ನಂತರ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಒಟ್ಟು 51 ಜನ ಪ್ರಯಾಣಿಸುತ್ತಿದ್ದರು. ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಐಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement