ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ :ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಆದ್ಯತೆ ನೀಡುವ ಸಲುವಾಗಿ ಸೆಪ್ಟೆಂಬರ್‌ 1ರ ಆದೇಶಕ್ಕೆ ತಡೆ ನೀಡುವಂತೆ ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕ ಪೀಠ ವಜಾಗೊಳಿಸಿದೆ.
ಸೆಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನದ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್‌ನ ನ್ಯಾ ಕೆ ನಟರಾಜನ್‌ ಅವರ ಪೀಠ ಸೆಪ್ಟೆಂಬರ್‌ 1ರಂದು ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೆ ಸಂಸದ ಸ್ಥಾನದ ಆಯ್ಕೆ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement