ಕೆ-ಸೆಟ್ ಪರೀಕ್ಷೆಗೆ ಅಧಿಸೂಚನೆ ಪ್ರಕಟ : ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 (ಕೆ-ಸೆಟ್) ಅನ್ನು ನ.26ರಂದು ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾಗಿರುವ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.
ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಹಾಗೂ ಗಣಕೀಕೃತ ಅಂಚೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟಂಬರ್‌ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಇ-ಪೋಸ್ಟ್ ಕಚೇರಿಗಳಲ್ಲಿ ಶುಲ್ಕ ಪಾವತಿಸಲು ಅಕ್ಟೋಬರ್‌ 3 ಕೊನೆಯ ದಿನವಾಗಿದೆ.
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ ಮತ್ತು 3ಎ, 3ಬಿ ಅಭ್ಯರ್ಥಿಗಳಿಗೆ 1,000 ರೂ.ಶುಲ್ಕ ಹಾಗೂ ಪ್ರವರ್ಗ-1, ಪರಿಶಿಷ್ಟ ಜಾತಿ, ಪಂಗಡ, ಅಂಗವಿಕಲರು ಮತ್ತು ತೃತೀಯ ಲಿಂಗಿಗಳಿಗೆ 700 ರೂ. ಶುಲ್ಕ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿ ಮಾಡಿಲ್ಲ ಎಂದು ತಿಳಿಸಿದೆ.

ಎರಡು ಅವಧಿಯಲ್ಲಿ ಪತ್ರಿಕೆ-1 ಮತ್ತು 2 ಪರೀಕ್ಷೆ ನಡೆಸಲಾಗುತ್ತದೆ. ಪತ್ರಿಕೆ-1 ಅನ್ನು 100 ಅಂಕಗಳಿಗೆ ನಿಗದಿ ಮಾಡಲಾಗಿದ್ದು, ನವೆಂಬರ್‌ 26ರಂದು ಬೆಳಿಗ್ಗೆ 10ರಿಂದ 11 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ. ಈ ಪತ್ರಿಕೆಯು 50 ಪ್ರಶ್ನೆಗಳನ್ನು ಹೊಂದಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ಜ್ಞಾನ, ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಯನ್ನು ಗ್ರಹಿಸುವ ಸಾಮರ್ಥ್ಯಗಳನ್ನು ಅಳೆಯಲಿದೆ.
ಪತ್ರಿಕೆ-2ಕ್ಕೆ 200 ಅಂಕಗಳಿರುತ್ತವೆ (100 ಪ್ರಶ್ನೆ). ಅದೇ ದಿನ ಮಧ್ಯಾಹ್ನ 12ರಿಂದ 2 ಗಂಟೆ ವರೆಗೆ ನಡೆಯಲಿದೆ. ಪತ್ರಿಕೆ ಅವಧಿ 2 ಗಂಟೆಯ ಅವಧಿಯದ್ದಾಗಿರುತ್ತದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಯು ಆಯ್ಕೆ ಮಾಡಿದ ವಿಷಯದ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿರುತ್ತದೆ.
ತಪ್ಪಾದ ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನ ಇರುವುದಿಲ್ಲ. ಸಾಮಾನ್ಯ ಪತ್ರಿಕೆ ಹಾಗೂ 41 ವಿಷಯಗಳ ಪಠ್ಯಕ್ರಮವನ್ನು ಪ್ರಾಧಿಕಾರದ ವೆಬ್‌ಸೈಟ್ ಅರ್ಹ ಅಭ್ಯರ್ಥಿಗಳು https://kea.kar.nic.in ಜಾಲತಾಣಕ್ಕೆ ನೀಡಲಾಗಿದೆ ಎಂದು ತಿಳಿಸಲಾಗಿದೆ. ವಿಷಯಗಳ ಕೋಡ್‌ಗಳು, ಅರ್ಜಿ ಸಲ್ಲಿಸುವ ವಿಧಾನ ಸೇರಿ ಇತರೆ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement