ಕಾವೇರಿ ನೀರು : ತಮಿಳುನಾಡಿಗೆ ಮತ್ತೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸಮಿತಿ ಶಿಫಾರಸು

ಬೆಂಗಳೂರು : ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯ ನೀರಿನ ಮಟ್ಟ ತೀವ್ರವಾಗಿ ಕುಸಿದಿರುವ ಮಧ್ಯೆಯೇ ಮತ್ತೆ ಕರ್ನಾಟಕವು   ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಶಿಫಾರಸು ಮಾಡಿದೆ.
ಇಂದು, ಮಂಗಳವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು ಕರ್ನಾಟಕ ಅಧಿಕಾರಿಗಳು ಮತ್ತು ತಮಿಳುನಾಡು ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ಜಲಾನಯನ ಭಾಗದಲ್ಲಿ ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯ ಭರ್ತಿಯಾಗಿಲ್ಲ. ಆಗಿದ್ದರೂ 5ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಳೆದ ಸಭೆಯಲ್ಲಿ ಪ್ರಾಧಿಕಾರ ಸೂಚಿಸಿತ್ತು. ಇದೀಗ ಮತ್ತೆ ನೀರು ಬಿಡುವಂತೆ ಸೂಚನೆ ನೀಡಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement