ಮುಂದಿನ ವರ್ಷದಿಂದ ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಕ್ರಮ

ಬೆಂಗಳೂರು : ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ ಪಠ್ಯ) ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
2024-25ನೇ ಸಾಲಿನಿಂದ ಪ್ರಥಮ ಪಿಯುಸಿ ಕಲಾ ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ಎನ್‌ಸಿಇಆರ್‌ಟಿ ಪಠ್ಯಕ್ರಮ ಓದಬೇಕಾಗುತ್ತದೆ. ವಿಜ್ಞಾನ ಕಾಂಬಿನೇಷನ್ ವಿದ್ಯಾರ್ಥಿಗಳು ಕೆಲವು ವರ್ಷಗಳಿಂದ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನೇ ಕಲಿಯುತ್ತಿದ್ದರು, ಕಲಾ ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ರಾಜ್ಯ ಪಠ್ಯಕ್ರಮ ಕಲಿಯುತ್ತಿದ್ದರು. ಆದರೆ ಈಗ ಈ ವಿದ್ಯಾರ್ಥಿಗಳಿಗೂ ಎನ್‌ಸಿಇಆರ್‌ಟಿ ಸಿಲೆಬಸ್‌ ಅಳವಡಿಸಲು ನಿರ್ಧರಿಸಲಾಗಿದೆ.
ಗಣಕ ವಿಜ್ಞಾನ, ಗೃಹ ವಿಜ್ಞಾನ ಮತ್ತು ಮನಃಶಾಸ್ತ್ರ ವಿಷಯಗಳ ಪಠ್ಯಪುಸ್ತಕಗಳನ್ನು 2024-25 ಸಾಲಿನಿಂದ ಪ್ರಥಮ ಪಿಯುಸಿ ತರಗತಿಗಳಿಗೆ ಮತ್ತು 2025-26ನೇ ಶೈಕ್ಷಣಿಕ ಸಾಲಿನಿಂದ ದ್ವಿತೀಯ ಪಿಯುಸಿ ತರಗತಿಗಳಿಗೆ ಅಳವಡಿಸಿಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement