ಬೆಂಗಳೂರು : ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ ಪಠ್ಯ) ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
2024-25ನೇ ಸಾಲಿನಿಂದ ಪ್ರಥಮ ಪಿಯುಸಿ ಕಲಾ ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ಎನ್‌ಸಿಇಆರ್‌ಟಿ ಪಠ್ಯಕ್ರಮ ಓದಬೇಕಾಗುತ್ತದೆ. ವಿಜ್ಞಾನ ಕಾಂಬಿನೇಷನ್ ವಿದ್ಯಾರ್ಥಿಗಳು ಕೆಲವು ವರ್ಷಗಳಿಂದ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನೇ ಕಲಿಯುತ್ತಿದ್ದರು, ಕಲಾ ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ರಾಜ್ಯ ಪಠ್ಯಕ್ರಮ ಕಲಿಯುತ್ತಿದ್ದರು. ಆದರೆ ಈಗ ಈ ವಿದ್ಯಾರ್ಥಿಗಳಿಗೂ ಎನ್‌ಸಿಇಆರ್‌ಟಿ ಸಿಲೆಬಸ್ ಅಳವಡಿಸಲು ನಿರ್ಧರಿಸಲಾಗಿದೆ.
ಗಣಕ ವಿಜ್ಞಾನ, ಗೃಹ ವಿಜ್ಞಾನ ಮತ್ತು ಮನಃಶಾಸ್ತ್ರ ವಿಷಯಗಳ ಪಠ್ಯಪುಸ್ತಕಗಳನ್ನು 2024-25 ಸಾಲಿನಿಂದ ಪ್ರಥಮ ಪಿಯುಸಿ ತರಗತಿಗಳಿಗೆ ಮತ್ತು 2025-26ನೇ ಶೈಕ್ಷಣಿಕ ಸಾಲಿನಿಂದ ದ್ವಿತೀಯ ಪಿಯುಸಿ ತರಗತಿಗಳಿಗೆ ಅಳವಡಿಸಿಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ