ಜ್ವರದಿಂದ ಇಬ್ಬರ ʼಅಸ್ವಾಭಾವಿಕ’ ಸಾವಿನ ನಂತರ ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಎಚ್ಚರಿಕೆ ಘೋಷಣೆ

ಕೋಝಿಕ್ಕೋಡ್‌ : ಕೇರಳದಲ್ಲಿ ಮತ್ತೆ ನಿಫಾ ವೈರಸ್‌ನ ಆತಂಕ ಎದುರಾಗಿದೆ. ಇಲ್ಲಿನ ಕೋಝಿಕ್ಕೋಡ್‌ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಜ್ವರದಿಂದ ಮೃತಪಟ್ಟಿದ್ದು, ಇದನ್ನು ಕೇರಳ ಆರೋಗ್ಯ ಇಲಾಖೆ “ಅಸ್ವಾಭಾವಿಕ” ಎಂದು ಪರಿಗಣಿಸಿದೆ ಹಾಗೂ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ಘೋಷಿಸಿದೆ.
ಮೃತ ವ್ಯಕ್ತಿಗಳಲ್ಲಿ ಒಬ್ಬರ ಸಂಬಂಧಿಕರನ್ನು ಸಹ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಇದು ಬಾವಲಿ ಜ್ವರ ಅಥವಾ ನಿಫಾ ವೈರಸ್‌ ಇರಬಹುದೆಂದು ವೈದ್ಯರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಸಿದೆ. ಹಾಗೂ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

2018ರಲ್ಲಿ ದೇಶದಲ್ಲೇ ಮೊದಲ ಬಾರಿಗೆ ಇದೇ ಜಿಲ್ಲೆಯಲ್ಲಿ ನಿಫಾ ವೈರಸ್‌ನಿಂದ ಸಾವು ಸಂಭವಿಸಿತ್ತು. 2021ರಲ್ಲಿ ಮತ್ತೆ ಕಾಣಿಸಿಕೊಂಡಿತ್ತು. ಈ ಘಟನೆ ಕೇರಳ ಆರೋಗ್ಯ ಇಲಾಖೆಯ ಗಮನಕ್ಕೆ ಬರುತ್ತಿದ್ದಂತೆಯೇ ರಾಜ್ಯ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ಅವರು ಸೋಮವಾರ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ದಕ್ಷಿಣ ಭಾರತದಲ್ಲಿ ಮೊದಲ ನಿಪಾ ವೈರಸ್ (NiV) ಏಕಾಏಕಿ ಕೋಝಿಕ್ಕೋಡ್‌ನಲ್ಲಿ ಮೇ 19, 2018 ರಂದು ವರದಿಯಾಗಿತ್ತು. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ನಿಪಾ ವೈರಸ್ ಸೋಂಕು ಪ್ರಾಣಿಗಳಿಂದ ಜನರಿಗೆ ಹರಡುವ ಝೂನೋಟಿಕ್ ಕಾಯಿಲೆಯಾಗಿದೆ ಮತ್ತು ಕಲುಷಿತ ಆಹಾರದ ಮೂಲಕ ಅಥವಾ ನೇರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ.
ಸೋಂಕಿತರಲ್ಲಿ, ಇದು ಲಕ್ಷಣರಹಿತ (ಸಬ್‌ಕ್ಲಿನಿಕಲ್) ಸೋಂಕಿನಿಂದ ತೀವ್ರವಾದ ಉಸಿರಾಟದ ಕಾಯಿಲೆ ಮತ್ತು ಮಾರಣಾಂತಿಕ ಎನ್ಸೆಫಾಲಿಟಿಸ್ ಗೆ ಕಾರಣವಾಗುತ್ತದೆ.

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement