ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿ ಬಿಡುಗಡೆ ಮಾಡಿದ ಸರ್ಕಾರ

ನವದೆಹಲಿ : ಸೆಪ್ಟೆಂಬರ್ 18ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಐದು ದಿನಗಳ ಅಧಿವೇಶನದಲ್ಲಿ ಸಂಸತ್ತಿನ 75 ವರ್ಷಗಳ ಇತಿಹಾಸದ ಕುರಿತು ಚರ್ಚೆ ನಡೆಯಲಿದೆ ಎಂದು ಸರ್ಕಾರ ಬುಧವಾರ ಸಂಜೆ ಬಹಿರಂಗ ಪಡಿಸುವ ಮೂಲಕ ಹಲವು ದಿನಗಳ ಊಹಾಪೋಹಗಳಿಗೆ ತೆರೆ ಎಳೆದಿದೆ. ಹಲವು ವಿವಾದಗಳನ್ನು ಸೃಷ್ಟಿಸಿರುವ ಮುಖ್ಯ ಚುನಾವಣಾ ಆಯುಕ್ತರ ನೇಮಕ ಸೇರಿದಂತೆ ನಾಲ್ಕು ಮಸೂದೆಗಳನ್ನು ಸರ್ಕಾರವು … Continued

7 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಬುಧವಾರ ರಾಜ್ಯದ 7 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್‌ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಅವರನ್ನು ನಿಯೋಜನೆ ಮಾಡಲಾಗಿದೆ. ಸೂಚಿಸಲಾಗಿದೆ. ಹುದ್ದೆ ನಿಯೋಜನೆಗೆ ಕಾದಿದ್ದ … Continued

ಅಪರಾಧಗಳ ಕುರಿತ ಪೊಲೀಸರ ಮಾಧ್ಯಮ ವಿವರಣೆ : ಹೊಸ ಮಾರ್ಗಸೂಚಿ ಸಿದ್ಧಪಡಿಸಲು ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಮಾಧ್ಯಮ ವಿಚಾರಣೆ ತಡೆಯುವುದಕ್ಕಾಗಿ ಅಂತಹ ಪ್ರಕರಣಗಳಲ್ಲಿ ಮಾಧ್ಯಮಗಳಿಗೆ ಕೃತ್ಯದ ವಿವರ ನೀಡುವಾಗ ಪಾಲಿಸಬೇಕಾದ ಮಾರ್ಗಸೂಚಿಗಳ ಕುರಿತು ಸಮಗ್ರ ಕೈಪಿಡಿ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ. ಈಗಿರುವ ಮಾರ್ಗಸೂಚಿಗಳು ಬಹಳ ಹಳೆಯದಾಗಿದ್ದು, ನಂತರದಲ್ಲಿ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಮಿನಲ್ ಪ್ರಕರಣ ವರದಿಗೆ ಸಂಬಂಧಿಸಿದಂತೆ … Continued

ಕಾಶ್ಮೀರ : ಎನ್‌ಕೌಂಟರ್‌ ವೇಳೆ 2 ಸೇನಾ ಅಧಿಕಾರಿಗಳು, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಲ್, ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಮೇಜರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪಾಧೀಕ್ಷಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುಮಾಯೂನ್‌ ಮುಜಾಮಿಲ್ ಭಟ್ ಅವರು ಗುಂಡಿನ ಚಕಮಕಿಯಲ್ಲಿ … Continued

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ; ಸಿಎಂಗೆ ಶಿಫಾರಸು

ಬೆಂಗಳೂರು: ರಾಜ್ಯದ 195 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಬರ ಘೋಷಣೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವಾರದಿಂದ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಮತ್ತು … Continued

ಉಜ್ವಲಾ ಯೋಜನೆಯಡಿ ದೇಶಾದ್ಯಂತ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕ : ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ : ಪ್ರಧಾನ ಮಂತ್ರಿ ಉಜ್ವಲಾ ಯೋಜನೆ ಅಡಿ ಕೇಂದ್ರ ಸರ್ಕಾರವು ದೇಶಾದ್ಯಂತ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕ ನೀಡಲು ಮುಂದಾಗಿದೆ. ಇದಕ್ಕಾಗಿ ತೈಲ ಮಾರಾಟ ಸಂಸ್ಥೆಗಳಿಗೆ 1,650 ಕೋಟಿ ರೂ.ಗಳ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ … Continued

ಭಾರತದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವಿಗೀಡಾದ ನಂತರ ನಕ್ಕು ಅಪಹಾಸ್ಯ : ಅಮೆರಿಕ ಪೊಲೀಸ್ ಅಧಿಕಾರಿ ವೀಡಿಯೊ ಬಹಿರಂಗ, ತನಿಖೆ ಆರಂಭ

ಅಮೆರಿಕದ ಸಿಯಾಟಲ್‌ ನಲ್ಲಿ ಈ ವರ್ಷದ ಜನವರಿಯಲ್ಲಿ ಪೊಲೀಸ್ ಗಸ್ತು ವಾಹನ ಡಿಕ್ಕಿ ಹೊಡೆದು ಭಾರತೀಯ ಮೂಲದ ಯುವತಿ ಮೃತಪಟ್ಟಿದ್ದರು. ಯುವತಿ ಸಾವಿನ ಬಗ್ಗೆ ಪೊಲೀಸ್‌ ಅಧಿಕಾರಿಯೊಬ್ಬರು ಅಪಹಾಸ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಅಧಿಕಾರಿ, 23 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಸಾವಿನ ಬಗ್ಗೆ ಅಪಹಾಸ್ಯ ಮಾಡಿರುವುದು ಬಾಡಿ- ವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದು … Continued

ವೀಡಿಯೊ….: ಮೆಕ್ಸಿಕೋ ಕಾಂಗ್ರೆಸ್‌ನಲ್ಲಿ ʼಅನ್ಯಲೋಕದ ಜೀವಿʼಗಳದ್ದು ಎನ್ನಲಾದ ʼನಿಗೂಢ ಶವʼಗಳ ಪ್ರದರ್ಶನ | ವೀಕ್ಷಿಸಿ

ಹಿಂದೆಂದೂ ಕೇಳಿರದ ಘಟನೆಯಲ್ಲಿ, ಮೆಕ್ಸಿಕೋ ಕಾಂಗ್ರೆಸ್ ಮಂಗಳವಾರ ರಾಜಧಾನಿಯಲ್ಲಿ ಅಸಾಮಾನ್ಯ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದು ಭೂಮ್ಯತೀತ ಜೀವಿಗಳ (extraterrestrial beings) ಅಸ್ತಿತ್ವದ ಬಗೆಗಿನ ಚರ್ಚೆಗಳಿಗೆ ಕಾರಣವಾಯಿತು. ಆನ್‌ಲೈನ್‌ನಲ್ಲಿ ಲೈವ್-ಸ್ಟ್ರೀಮ್ ಮಾಡಲಾದ ಗುರುತಿಸಲಾಗದ ಅಸಂಗತ ವಿದ್ಯಮಾನಗಳ ಕುರಿತು ಕಾಂಗ್ರೆಸ್ ವಿಚಾರಣೆಯ ಸಮಯದಲ್ಲಿ, ಪೆರುವಿನ ಕುಸ್ಕೋದಿಂದ ಮರಳಿ ಪಡೆಯಲಾದ ಎರಡು ‘ಅನ್ಯಲೋಕದ ಶವಗಳು’ ಎಂದು ಹೇಳಲಾದ ಆಕೃತಿಯನ್ನು ಮೆಕ್ಸಿಕೋ … Continued

ವಿಶೇಷ ಅಧಿವೇಶನಕ್ಕೆ ಮೊದಲು ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಪ್ರಾರಂಭವಾಗುವ ಮೊದಲು ಸೋಮವಾರ ಸಂಜೆ ಸರ್ಕಾರವು ಸರ್ವಪಕ್ಷ ಸಭೆಯನ್ನು ನಡೆಸಲಿದೆ. ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಲ್ಹಾದ ಜೋಶಿ ಅವರು, ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ: ಈ ತಿಂಗಳ 18 ರಿಂದ ಸಂಸತ್ತಿನ ಅಧಿವೇಶನಕ್ಕೆ ಮುಂಚಿತವಾಗಿ, 17 ರಂದು ಸಂಜೆ 4:30 … Continued

ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ: ದಂಪತಿ ಸಾವು, ಪುಟ್ಟ ಮಗು ಸ್ಥಿತಿ ಗಂಭೀರ

ಚಿಕ್ಕಮಗಳೂರು: ತಾಲೂಕಿನ ಕಡೂರು- ಮೂಡಿಗೆರೆ ಹೆದ್ದಾರಿಯ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್‌ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ … Continued