ಅಪರಾಧಗಳ ಕುರಿತ ಪೊಲೀಸರ ಮಾಧ್ಯಮ ವಿವರಣೆ : ಹೊಸ ಮಾರ್ಗಸೂಚಿ ಸಿದ್ಧಪಡಿಸಲು ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಮಾಧ್ಯಮ ವಿಚಾರಣೆ ತಡೆಯುವುದಕ್ಕಾಗಿ ಅಂತಹ ಪ್ರಕರಣಗಳಲ್ಲಿ ಮಾಧ್ಯಮಗಳಿಗೆ ಕೃತ್ಯದ ವಿವರ ನೀಡುವಾಗ ಪಾಲಿಸಬೇಕಾದ ಮಾರ್ಗಸೂಚಿಗಳ ಕುರಿತು ಸಮಗ್ರ ಕೈಪಿಡಿ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.
ಈಗಿರುವ ಮಾರ್ಗಸೂಚಿಗಳು ಬಹಳ ಹಳೆಯದಾಗಿದ್ದು, ನಂತರದಲ್ಲಿ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಮಿನಲ್ ಪ್ರಕರಣ ವರದಿಗೆ ಸಂಬಂಧಿಸಿದಂತೆ ಏರಿಕೆ ಕಂಡುಬಂದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿದೆ.
ಮಾಧ್ಯಮ ವರದಿಗಳು ಕೆಲವೊಮ್ಮೆ ಆರೋಪಿಯ ವ್ಯಕ್ತಿತ್ವಕ್ಕೆ ಘಾಸಿಯುಂಟು ಮಾಡುತ್ತವೆ ಮತ್ತು ಪಕ್ಷಪಾತದ ವರದಿಯಿಂದಾಗಿ ಅಪರಾಧದ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸುವಂತಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಮಾಧ್ಯಮಗಳಿಗೆ ವಿವರಣೆ ನೀಡುವಾಗ ಪೊಲೀಸರು ಒದಗಿಸುವ ಮಾಹಿತಿ ವಸ್ತುನಿಷ್ಠ ಸ್ವರೂಪದಲ್ಲಿರಬೇಕು ಮತ್ತು ಆರೋಪಿಗಳ ಕೃತ್ಯದ ಮೇಲೆ ಪ್ರಭಾವ ಬೀರುವಂತಿರಬಾರದು ಎಂದು ಅದು ಹೇಳಿದೆ.

ಮಾಧ್ಯಮ ವಿಚಾರಣೆ ನಡೆದಾಗ ನ್ಯಾಯದ ಹಾದಿ ದಿಕ್ಕು ತಪ್ಪುತ್ತದೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಸಿಬ್ಬಂದಿ ಮಾಧ್ಯಮಗಳಿಗೆ ನೀಡುವ ವಿವರಣೆ ಕುರಿತು ಗೃಹ ಸಚಿವಾಲಯ ಸಮಗ್ರ ಕೈಪಿಡಿ ಸಿದ್ಧಪಡಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಪೀಠ ಹೇಳಿದೆ.
ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು (ಡಿಜಿ- ಐಜಿಪಿಗಳು) ತಮ್ಮ ಅಭಿಪ್ರಾಯಗಳನ್ನು ಸಚಿವಾಲಯಕ್ಕೆ ಒಂದು ತಿಂಗಳೊಳಗೆ ಸಲ್ಲಿಸಬೇಕು. ರಾಜ್ಯ ಡಿಜಿಪಿಗಳು ಮತ್ತಿತರ ಭಾಗೀದಾರರ ಅಭಿಪ್ರಾಯ ಪರಿಗಣಿಸಿದ ನಂತರ ಸಚಿವಾಲಯ ಮಾರ್ಗಸೂಚಿ ಸಿದ್ಧಪಡಿಸಬೇಕು. ಇಡೀ ಪ್ರಕ್ರಿಯೆ ಮೂರು ತಿಂಗಳೊಳಗೆ ಪೂರ್ಣಗೊಳ್ಳಬೇಕು ಎಂದು ಪೀಠ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶಿಸಿದೆ.
ಪೊಲೀಸ್ ಎನ್‌ಕೌಂಟರ್‌ಗಳಿಗೆ ಕುರಿತು ಸರ್ಕಾರೇತರ ಸಂಸ್ಥೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈ ಆದೇಶ ನೀಡಿದೆ.

ಇಂದಿನ ಪ್ರಮುಖ ಸುದ್ದಿ :-   ಆಸ್ಟ್ರೇಲಿಯಾ ವಿರುದ್ಧ ಗೆಲುವು ; ಪಾಕಿಸ್ತಾನ ಹೊರದಬ್ಬಿ ವಿಶ್ವದ ನಂ.1 ತಂಡವಾದ ಭಾರತ; ಎಲ್ಲ ಸ್ವರೂಪದ ಕ್ರಿಕೆಟ್‌ನಲ್ಲೂ ಅಗ್ರಸ್ಥಾನ ಪಡೆದ ಏಷ್ಯಾದ ಮೊದಲ ತಂಡ ಭಾರತ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement