ಉಜ್ವಲಾ ಯೋಜನೆಯಡಿ ದೇಶಾದ್ಯಂತ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕ : ಕೇಂದ್ರ ಸರ್ಕಾರ ಒಪ್ಪಿಗೆ

ನವದೆಹಲಿ : ಪ್ರಧಾನ ಮಂತ್ರಿ ಉಜ್ವಲಾ ಯೋಜನೆ ಅಡಿ ಕೇಂದ್ರ ಸರ್ಕಾರವು ದೇಶಾದ್ಯಂತ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕ ನೀಡಲು ಮುಂದಾಗಿದೆ. ಇದಕ್ಕಾಗಿ ತೈಲ ಮಾರಾಟ ಸಂಸ್ಥೆಗಳಿಗೆ 1,650 ಕೋಟಿ ರೂ.ಗಳ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ನೂತನವಾಗಿ 75 ಲಕ್ಷ ಉಚಿತ ಸಂಪರ್ಕ ಪಡೆಯುವ ಫಲಾನುಭವಿಗಳು ಸೇರ್ಪಡೆ ಆಗಲಿದ್ದು, ಈವರೆಗೆ ಈ ಯೋಜನೆಯ ಪ್ರಯೋಜನ ಪಡೆದವರ ಒಟ್ಟು ಸಂಖ್ಯೆ 10 ಕೋಟಿ 35 ಲಕ್ಷಕ್ಕೆ ಏರಿಕೆ ಆಗಲಿದೆ. ದೇಶಾದ್ಯಂತ ಬಡ ಕುಟುಂಬಗಳು ಈ ಯೋಜನೆಯ ಲಾಭ ಪಡೆಯುತ್ತಿವೆ.
ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ಮೇ 2016ರಲ್ಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಬಡತನ ರೇಖೆಗಿಂತ ಕೆಳಗಿಳಿರುವ ಕುಟುಂಬಗಳ (ಬಿಪಿಎಲ್) ಮಹಿಳೆಯರ ಹೆಸರಲ್ಲಿ ಉಚಿತವಾಗಿ ಎಲ್‌ಪಿಜಿ ಸಂಪರ್ಕ ನೀಡಲಾಗುತ್ತದೆ.

ಇಂದಿನ ಪ್ರಮುಖ ಸುದ್ದಿ :-   ರಾತ್ರಿ ಸುರಿದ ಭಾರೀ ಮಳೆಯ ನಂತರ ನಾಗ್ಪುರ ಜಲಮಯ : ರಕ್ಷಣಾ ಕಾರ್ಯಾಚರಣೆಗಾಗಿ ಕೇಂದ್ರ ಪಡೆಗಳ ನಿಯೋಜನೆ

ಉಜ್ವಲಾ ಯೋಜನೆ ವಿಸ್ತರಣೆ ಜೊತೆಯಲ್ಲೇ ಜಿ20 ಶೃಂಗ ಸಭೆಯು ದೊಡ್ಡ ಮಟ್ಟದಲ್ಲಿ ಯಶಸ್ಸಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಇದರ ಶ್ರೇಯವನ್ನು ಪ್ರಧಾನಿ ಮೋದಿಗೆ ನೀಡಲು ಕೇಂದ್ರ ಸಚಿವ ಸಂಪುಟ ಸರ್ವಾನುಮತದ ನಿರ್ಣಯ ಅಂಗೀಕರಿಸಿತು.
ಜಿ20 ಯಶಸ್ಸಿನ ಕ್ರೆಡಿಟ್ ಅನ್ನು ಪ್ರಧಾನಿ ಮೋದಿಗೆ ನಿರ್ಣಯವನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿದರು. ಇದಕ್ಕೆ ಸರ್ವಾನುಮತದ ಅಂಗೀಕಾರ ನೀಡಲಾಯಿತು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್‌ ಮಾಹಿತಿ ನೀಡಿದರು.
ಜಿ20 ಶೃಂಗ ಸಭೆಯ ನವದೆಹಲಿ ಘೋಷಣೆಗೆ ಎಲ್ಲ ಸದಸ್ಯ ರಾಷ್ಟ್ರಗಳೂ ಸರ್ವಾನುಮತದ ಅಂಗೀಕಾರ ಸೂಚಿಸಿದ್ದವು. ಇದು ಭಾರತದ ರಾಜತಾಂತ್ರಿಕ ಯಶಸ್ಸಿಗೆ ಹಿಡಿದ ಕೈ ಕನ್ನಡಿಯಾಗಿತ್ತು. ಇದಲ್ಲದೆ ಆಫ್ರಿಕಾ ಒಕ್ಕೂಟವನ್ನೂ ಜಿ – 20 ಶೃಂಗದ ಭಾಗವನ್ನಾಗಿ ಮಾಡಿಕೊಳ್ಳುವ ಭಾರತದ ನಿಲುವಿಗೂ ಶೃಂಗ ಸಭೆಯಲ್ಲಿ ಸಹಮತ ವ್ಯಕ್ತವಾಗಿತ್ತು.

 

ಇಂದಿನ ಪ್ರಮುಖ ಸುದ್ದಿ :-   ಏಷ್ಯನ್ ಗೇಮ್ಸ್‌ನಿಂದ 3 ಭಾರತೀಯ ಅಥ್ಲೀಟ್‌ಗಳಿಗೆ ಚೀನಾ ನಿಷೇಧದ ನಂತರ ಕ್ರೀಡಾ ಸಚಿವರ ಪ್ರವಾಸ ರದ್ದು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement