ಉದ್ಯಮಿಗೆ ವಂಚನೆ ಆರೋಪ: ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಉಡುಪಿ: ಜಿಲ್ಲೆಯ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಟಿಕೆಟ್‌ ಕೊಡಿಸುವುದಾಗಿ ಹೇಳಿ ಐದು ಕೋಟಿ ರೂ. ಹಣ ಪಡೆದುಕೊಂಡು ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಪ್ರಕರಣ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

5 / 5. ಒಟ್ಟು ವೋಟುಗಳು 4

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement