ಭರತಪುರ: ರಾಜಸ್ಥಾನದ ಭರತಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ.
ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಇಂದು ಬುಧವಾರ ಮುಂಜಾನೆ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೇತುವೆ ಮೇಲೆ ಬಸ್ ಕೆಟ್ಟು ನಿಂತಿದ್ದಾಗ ಈ ಘಟನೆ ನಡೆದಿದೆ. ಬಸ್ ಚಾಲಕ ಮತ್ತು ಕೆಲವು ಪ್ರಯಾಣಿಕರು ಬಸ್‌ನ ಹಿಂದೆ ನಿಂತಿದ್ದಾಗ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಬದುಕುಳಿದವರು ಹೇಳಿದ್ದಾರೆ.
ಇಂಧನ ಖಾಲಿಯಾದ ನಂತರ ಲಖನ್‌ಪುರ ಪ್ರದೇಶದ ಅಂಟ್ರಾ ಫ್ಲೈಓವರ್‌ನಲ್ಲಿ ಬಸ್ ನಿಂತಿತ್ತು. ಅದಕ್ಕೆ ಟ್ರಕ್ ಹಿಂದಿನಿಂದ ಡಿಕ್ಕಿ ಹೊಡೆದ ನಂತರ ಐವರು ಪುರುಷರು ಮತ್ತು ಆರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ದುರಸ್ತಿ ಕಾರ್ಯ ನಡೆಯುತ್ತಿದ್ದಾಗ ಹೆದ್ದಾರಿಯಲ್ಲಿ ನಿಂತಿತ್ತು. ಡಿಕ್ಕಿ ಸಂಭವಿಸಿದಾಗ ಕೆಲವು ಪ್ರಯಾಣಿಕರು ಬಸ್‌ನಲ್ಲಿದ್ದರೆ, ಕೆಲವರು ಹೊರಗೆ ನಿಂತಿದ್ದರು” ಎಂದು ಭರತ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮೃದುಲ್ ಕಚವಾ ಹೇಳಿದ್ದಾರೆ.
ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ