ರಾಯಚೂರು : ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ(G20) ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಜೊತೆ ಅವರ ತಂದೆ-ತಾಯಿ ಕೂಡ ಆಗಮಿಸಿದ್ದು, ಅವರು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ.
ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಬಂದಿರುವ ಪೋಷಕರು ಬೆಂಗಳೂರಿನಲ್ಲಿ ಉಳಿದುಕೊಂಡಿದ್ದು ಈಗ ಮಂತ್ರಾಲಯದ ಗುರು ರಾಯರ ದರ್ಶನ ಪಡೆದಿದ್ದಾರೆ.
ಶೃಂಗಸಭೆ ವೇಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದ ರಿಷಿ ಸುನಕ್ ದಂಪತಿ ಫೋಟೋಗಳು ವೈರಲ್ ಆಗಿದ್ದವು. ಬಳಿಕ ರಿಷಿ ಸುನಕ್ ಪತ್ನಿ ಅಕ್ಷತಾಮೂರ್ತಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಾಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಪುತ್ರಿ.
ರಿಷಿ ಸುನಕ್ ತಾಯಿ ಉಷಾ ಅವರು ತಮ್ಮ ಬೀಗತಿ ಸುಧಾಮೂರ್ತಿ ಅವರೊಂದಿಗೆ ಬೆಂಗಳೂರಿನ ಶಾಸಕ ಉದಯ ಗರುಡಾಚಾರ್ ಅವರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈಗ ರಿಷಿ ಸುನಾಕ್ ತಂದೆ-ತಾಯಿ ಮಂತ್ರಾಲಯದ ರಾಯರ ದರ್ಶನ ಮಾಡಿದ್ದಾರೆ.
ತಂದೆ ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಬೀಗತಿ ಸುಧಾಮೂರ್ತಿ ಜೊತೆ ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಬಳಿಕ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಾದ ಪಡೆದರು. ಸ್ವಾಮೀಜಿ ವಸ್ತ್ರ, ಫಲ ಮಂತ್ರಾಕ್ಷತೆ, ಸ್ಮರಣಿಕೆ ನೀಡಿ ಆಶೀರ್ವದಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ