ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ; ಸಿಎಂಗೆ ಶಿಫಾರಸು

ಬೆಂಗಳೂರು: ರಾಜ್ಯದ 195 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಬರ ಘೋಷಣೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವಾರದಿಂದ ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಮತ್ತು ಬೆಳೆ ಪರಿಶೀಲನೆ ನಡೆಸಲಾಗಿದೆ. ಕೇಂದ್ರದ ಮಾರ್ಗಸೂಚಿ ಪ್ರಕಾರ 161 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ ಎಂದು ತಿಳಿಸಿದರು.
ಕೇಂದ್ರ ಮಾರ್ಗಸೂಚಿ ಅನ್ವಯಿಸದಿದ್ದರೂ 34 ತಾಲೂಕುಗಳಲ್ಲೂ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳನ್ನೂ ಸಹ ಪಟ್ಟಿಗೆ ಸೇರಿಸಲಾಗಿದೆ. ಐದನೇ ಸಂಪುಟ ಉಪಸಮಿತಿ ಸಭೆಯಲ್ಲಿ ಸಂಬಂಧಿತ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬರ ಘೋಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ. ಕೇಂದ್ರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಈ ವರ್ಷ ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಇದ್ದ ಕಾರಣಕ್ಕೆ 134 ತಾಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಬೆಳೆ ಪರಿಶೀಲನೆಗೆ ಸೂಚಿಸಲಾಗಿತ್ತು. ಎಲ್ಲಾ ತಾಲೂಕುಗಳ ವರದಿಯೂ ಕೈಸೇರಿದ್ದು ಇದರ ಆಧಾರದ ಮೇಲೆ ಬರ ತಾಲೂಕುಗಳ ಪಟ್ಟಿ ಸಿದ್ಧಪಡಿಸಲಾಗಿದೆ” ಎಂದು ತಿಳಿಸಿದರು.
40 ತಾಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಆದರೆ, ಈ ತಾಲೂಕುಗಳನ್ನೂ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಹೀಗಾಗಿ 15 ದಿನಗಳ ನಂತರ ಸ್ಯಾಟಲೈಟ್ ಇಮೇಜ್ ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಆ ವೇಳೆ ‘ಕೇಂದ್ರದ ಬರ ಮಾರ್ಗಸೂಚಿ’ಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.
ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಪ್ರತಿ ತಾಲೂಕಿನಲ್ಲೂ ಟಾಸ್ಕ್ ಫೋರ್ಸ್ ರಚನೆಗೆ ಸಿದ್ದತೆ ನಡೆಸಲಾಗಿದೆ. ಅಲ್ಲದೆ, ಬರ ಘೋಷಿಸುತ್ತಿದ್ದಂತೆ, ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ 100 ಮಾನವ ದಿನಗಳನ್ನು 150 ದಿನಕ್ಕೆ ಹೆಚ್ಚಿಸಲಾಗುವುದು. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇಂದಿನ ಪ್ರಮುಖ ಸುದ್ದಿ :-   ಸೆ. 26 ರಂದು ಬೆಂಗಳೂರು ಬಂದ್‌ : ಯಾವುದೆಲ್ಲ ಸ್ಥಗಿತವಾಗಲಿದೆ..?

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement