ಚಿಕ್ಕಮಗಳೂರು: ತಾಲೂಕಿನ ಕಡೂರು- ಮೂಡಿಗೆರೆ ಹೆದ್ದಾರಿಯ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್‌ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಜೊತೆಗಿದ್ದ 14 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿವೆ.
ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಕಾರು, ಬೈಕ್ ಮತ್ತು ಲಾರಿ ಮಧ್ಯೆ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಮಂಗಳವಾರ ರಾತ್ರಿ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ