ಬೆಂಗಳೂರು: ಬುಧವಾರ ರಾಜ್ಯದ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಅವರನ್ನು ನಿಯೋಜನೆ ಮಾಡಲಾಗಿದೆ. ಸೂಚಿಸಲಾಗಿದೆ.
ಹುದ್ದೆ ನಿಯೋಜನೆಗೆ ಕಾದಿದ್ದ ಪ್ರದೀಪ ಜಿ. ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ (ಸೋಶಿಯಲ್ ಆಡಿಟ್) ನಿರ್ದೇಶಕರಾಗಿ ನಿಯೋಜಿಸಲಾಗಿದೆ.
ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದ ಎಸ್. ವಿಕಾಶ ಕಿಶೋರ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿ ನಗರದ ವಲಯ ಆಯುಕ್ತರಾಗಿ ನಿಯೋಜನೆ ಮಾಡಲಾಗಿದೆ.
ಹುದ್ದೆ ನಿಯೋಜನೆ ಕಾದಿದ್ದ ಲತಾ ಕುಮಾರಿ ಅವರನ್ನು ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿನಿಯೋಜನೆ ಮಾಡಲಾಗಿದೆ.
ನಿಯೋಜನೆ ಕಾದಿದ್ದ ಸಿ.ಎನ್. ಶ್ರೀಧರ ಅವರನ್ನು ಕರಕುಶಲ ಮತ್ತು ಕೈಮಗ್ಗ ಇಲಾಖೆ ನಿರ್ದೇಶಕರ ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಸಂಗಪ್ಪ ಅವರನ್ನು ಕಿಯೋನಿಸ್ಕ್ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ರೇಷ್ಮೆ ಸಂಶೋಧನಾ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿದ್ದ ಶ್ರೀರೂಪಾ ಅವರನ್ನು ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ಕಾರ್ಯಕಾರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ